ಮಾತು ಕೇಳದೆ 2ತಿಂಗಳ ಮಗುವಿಗೆ ಹೊಡೆಯುತ್ತಿದ್ದ ಬಾಲಕ ➤ ಕೋಪಕ್ಕೆ ಮಗನನ್ನೇ ಕೊಂದ ತಾಯಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.13: 2 ತಿಂಗಳ ಮಗುವಿಗೆ ಹೊಡೆಯುತ್ತಿದ್ದ 6 ವರ್ಷದ ಮಗನ ಮೇಲೆ ಕೋಪಗೊಂಡ ತಾಯಿಯೊಬ್ಬಳು ಕತ್ತು ಹಿಸುಕಿ ಹತ್ಯೆ ಮಾಡಿರುವ ಹೃದಯ ವಿದ್ರಾವಕ ಘಟನೆ ರಾಜರಾಜೇಶ್ವರಿ ನಗರದ ಪಟ್ಟಣಗೆರೆಯಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ.

 

 

ಪಟ್ಟಣಗೆರೆ ನಿವಾಸಿ ತೇಜ್ ರಾಮ್ ಮತ್ತು ದೇವಿ ಅವರ ಪುತ್ರ ಮನೀಶ್ (6) ಮೃತ ಬಾಲಕ. ಈ ಸಂಬಂಧ ಪತಿ ಕೊಟ್ಟ ದೂರಿನ ಮೇರೆಗೆ ಮಗುವಿನ ತಾಯಿ ದೇವಿಯನ್ನು (26) ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ದಂಪತಿ ಮೂಲತಃ ರಾಜಸ್ಥಾನ ರಾಜ್ಯದವರಾಗಿದ್ದಾರೆ. ತೇಜರಾಮ್ ಎಂಟು ವರ್ಷಗಳಿಂದ ನಗರದಲ್ಲಿ ನೆಲೆಸಿದ್ದು, ಪಟ್ಟಣಗೆರೆಯಲ್ಲಿ ಪ್ರಾವಿಷನ್ ಸ್ಟೋರ್ ಹೊಂದಿದ್ದಾರೆ. 7 ವರ್ಷಗಳ ಹಿಂದೆ ತೇಜ್ ರಾಮ್ ದೇವಿ ಅವರನ್ನು ವಿವಾಹವಾಗಿದ್ದರು. ದಂಪತಿಗೆ ಆರು ವರ್ಷದ ಮನೀಶ್ ಹಾಗೂ ಎರಡು ತಿಂಗಳ ಮಗು ಇದೆ.

Also Read  ವಿಟ್ಲ: 8ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ ➤ ಮುಂದುವರಿದ ತನಿಖೆ

 

error: Content is protected !!
Scroll to Top