ಹೃದಯಾಘಾತದಿಂದಾಗಿ ಕೊನೆಯುಸಿರೆಳೆದ ಮಾಜಿ ಸಚಿವೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.16: ರೇಷ್ಮೆ ಖಾತೆ ಸಚಿವರಾಗಿ ಕೆಲಸ ನಿರ್ವಹಿಸಿ ರಾಜ್ಯ ರಾಜಕೀಯದಲ್ಲಿ ತನ್ನದೇಯಾದ ಛಾಪು ಮೂಡಿಸಿದ್ದ ಮಾಜಿ ಸಚಿವೆ ರೇಣುಕಾ ರಾಜೇಂದ್ರನ್ (78) ಕೊರೋನಾ ಸೋಂಕಿಗೆ ತುತ್ತಾಗಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ಆದರೆ, ಇಂದು ಬೆಳಗ್ಗೆ ದಿಢೀರ್ ಹೃದಯಾಘಾತದಿಂದಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಕೊರೋನಾ ಇಡೀ ದೇಶಕ್ಕೆ ವ್ಯಾಪಿಸಿದ್ದ ಸಂದರ್ಭದಲ್ಲಿ ಹಿರಿಯ ರಾಜಕಾರಣಿ ರೇಣುಕಾ ರಾಜೇಂದ್ರನ್ ಅವರಿಗೂ ಸಹ ಸೋಂಕು ತಗುಲಿತ್ತು. ಆದರೆ, ಅವರು ಅಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ಆದರೆ, ಇಂದು ದುರಾದೃಷ್ಟವಶಾತ್ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ದಿವಂಗತ ಸಚಿವೆ ರೇಣುಕಾ ರಾಜೇಂದ್ರನ್ ಚಿಕ್ಕಬಳ್ಳಾಪುರ ಮೂಲದವರಾಗಿದ್ದು, ಅವರ ಅಂತ್ಯಕ್ರಿಯೆ ಸ್ವಗ್ರಾಮದಲ್ಲೇ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.ಮಾಜಿ ಸಚಿವೆ ರೇಣುಕಾ ರಾಜೇಂದ್ರನ್ ಇಬ್ಬರು ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಅವರ ಅಗಲಿಕೆಗೆ ಇಡೀ ರಾಜಕೀಯ ವಲಯದ ಪ್ರಮುಖ ಗಣ್ಯರು ಮತ್ತು ನಾಯಕರು ಸಂತಾಪ ಸೂಚಿಸಿದ್ದಾರೆ.

Also Read  ಕಡಬ: ನಾಳೆ (ಅ.26) ವಿದ್ಯುತ್ ನಿಲುಗಡೆ

 

 

error: Content is protected !!
Scroll to Top