(ನ್ಯೂಸ್ ಕಡಬ) newskadaba.com ಉಡುಪಿ, ಡಿ.17: ಕರ್ನಾಟಕದ ರಾಜ್ಯಪಾಲ ವಾಜೂಭಾಯಿ ವಾಲಾರನ್ನು ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ರಾಜಭವನದಲ್ಲಿ ಭೇಟಿಯಾದರು. ಅಯೋಧ್ಯೆ ರಾಮಮಂದಿರ ಕಾರ್ಯಕ್ಕೆ ಸಮಸ್ತರ ಬೆಂಬಲ, ಸಹಕಾರ ಅಪೇಕ್ಷಿಸಿ ದಕ್ಷಿಣ ರಾಜ್ಯಗಳ ಸಂಚಾರದಲ್ಲಿರುವ ಶ್ರೀಗಳು ನಾಡಿನ ಜನತೆಯ ಬೆಂಬಲಕ್ಕಾಗಿ ರಾಜ್ಯಪಾಲರಿಗೆ ಪತ್ರ ಅರ್ಪಿಸಿದರು. ಶ್ರೀಗಳವರನ್ನು ಬರಮಾಡಿಕೊಂಡು ಗೌರವ ಅರ್ಪಿಸಿದ ರಾಜ್ಯಪಾಲರು, ಸ್ವಲ್ಪ ಹೊತ್ತು ಸಮಾಲೋಚನೆ ನಡೆಸಿದರು .
1953 ರಲ್ಲಿ ಗೋಳ್ವಲ್ಕರ್ ಗೋಹತ್ಯಾ ನಿಷೇಧಕ್ಕೆ ಕರೆ ಕೊಟ್ಟಾಗ ತಾನಿನ್ನೂ ಯುವಕನಾಗಿದ್ದೆ. ಆಗ ತನ್ನೊಂದಿಗೆ ಇನ್ನೋರ್ವ ಸ್ನೇಹಿತನನ್ನು ಕರೆದುಕೊಂಡು ಸೈಕಲ್ ನಲ್ಲಿ ಗುಜರಾತಿನ ಮನೆ ಮನೆಗೆ ತೆರಳಿ ಸಹಿ ಸಂಗ್ರಹ ಮಾಡಿದ್ದು, ಸಾಕ್ಷರತೆಯ ಕೊರತೆ ಇದ್ದ ಆ ಕಾಲದಲ್ಲಿ ಜನರು ಹೆಬ್ಬೆಟ್ಟೊತ್ತಿ ಬೆಂಬಲಿಸಿದ್ದನ್ನು ಸ್ಮರಿಸಿದರು ಮತ್ತು ಅಯೋಧ್ಯೆ ಆಂದೋಲನದ ವಿವಿಧ ಹಂತಗಳಲ್ಲಿ ಪಾಲ್ಗೊಂಡದ್ದನ್ನು ಸ್ಮರಿಸಿ ರಾಮ ಮಂದಿರ ನಿರ್ಮಾಣ ಕಾರ್ಯದಲ್ಲಿ ಪೂರ್ಣ ಬೆಂಬಲಿಸುವುದಾಗಿ ತಿಳಿಸಿದರು.ಪೇಜಾವರ ಶ್ರೀಗಳು ರಾಜ್ಯಪಾಲರಿಗೆ ಶಾಲು ಹೊದೆಸಿ, ಸ್ಮರಣಿಕೆ, ಫಲಪುಷ್ಠ ಸಹಿತ ಆಶೀರ್ವದಿಸಿದರು.