ಇಂದು 10ನೇ ವರ್ಷದ ಪ್ರತಿಷ್ಠಾ ವರ್ಧಂತ್ಯತ್ಸವ ➤ ನೂಜಿ ಶ್ರೀ ಉಳ್ಳಾಲ್ತಿ ದೈವಸ್ಥಾನ; ಹಸಿರು ಕಾಣಿಕೆ ಸಮರ್ಪಣೆ

(ನ್ಯೂಸ್ ಕಡಬ) newskadaba.com ಕಲ್ಲುಗುಡ್ಡೆ, ಡಿ.21:ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ನೂಜಿಬೈಲ್ ನೂಜಿಶ್ರೀ ಉಳ್ಳಾಲ್ತಿ ಅಮ್ಮನವರ ದೈವಸ್ಥಾನದ 10ನೇ ವರ್ಷದ ವರ್ಧಂತ್ಯುತ್ಸವ ಡಿ.22ರಂದು ಕೆಮ್ಮಿಂಜೆ ಬ್ರಹ್ಮಶ್ರೀ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಜರುಗಲಿದೆ.
ಆ ಪ್ರಯುಕ್ತ ಸೋಮವಾರ ಉಳ್ಳಾಲ್ತಿ ಅಮ್ಮನವರ ಸನ್ನಿಧಿಗೆ ಹಸಿರು ಕಾಣಿಕೆ ಸಮರ್ಪಿಸಲಾಯಿತು.

 

ಮದ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ ಬಳಿಕ ಅನ್ನಪ್ರಸಾದ ವಿತರಿಸಲಾಯಿತು. ಅರ್ಚಕ ಕೃಷ್ಣ ಹೆಬ್ಬಾರ್ ಪೂಜಾ ವಿಧಿವಿಧಾನಗಳನ್ನು ನೆರವೇರಿಸಿದರು. ಆಡಳಿತ ಮಂಡಳಿ ಅಧ್ಯಕ್ಷ ಮೃತ್ಯುಂಜಯ ಬೀಡೆ ಕೆರೆತೋಟ, ಉತ್ಸವ ಸಮಿತಿ ಅಧ್ಯಕ್ಷ ದುಗ್ಗಣ್ಣ ಗೌಡ ಹೊಸಮನೆ, ಸೇರಿದಂತೆ ಪರಿಚಾರಕ ವರ್ಗ, ಆಡಳಿತ ಸಮಿತಿ, ಉತ್ಸವ ಸಮಿತಿ ಪದಾಧಿಕಾರಿಗಳು, ಸದಸ್ಯರು, ಊರ ಭಕ್ತರು ಉಪಸ್ಥಿತರಿದ್ದರು.

Also Read  ಕೊಯಿಲ-ರಾಮಕುಂಜ: ಸಾರ್ವಜನಿಕ ಶ್ರೀ ಗಣೇಶೋತ್ಸವ

 

error: Content is protected !!
Scroll to Top