ಬಂಟ್ವಾಳ :ಮತ ಚಲಾಯಿಸಿದ ಮಾಜಿ ಸಚಿವ ರಮಾನಾಥ ರೈ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಡಿ.22: ತಾಲೂಕಿನ 57 ಗ್ರಾಪಂಗಳಿಗೆ ಮಂಗಳವಾರ ಬೆಳಗ್ಗೆ 7 ಗಂಟೆಗೆ ಮತದಾನ ಆರಂಭಗೊಂಡಿದೆ.ಸಾಲಿನಲ್ಲಿ ನಿಂತುಕೊಂಡು ಮಾಸ್ಕ್ ಧರಿಸಿದ ಮತದಾರರು, ಓಟು ಹಾಕಲು ಆಗಮಿಸುತ್ತಿದ್ದಾರೆ.

ಬಂಟ್ವಾಳ ತಾಲೂಕಿನ 396 ಮತಗಟ್ಟೆಗಳಲ್ಲಿ ಮತದಾರರು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ತಾಲೂಕಿನ 57 ಗ್ರಾಪಂಗಳ 837 ಸ್ಥಾನಗಳ ಪೈಕಿ 15 ಸ್ಥಾನಗಳಿಗೆ ಅವಿರೋಧ ಆಯ್ಕೆ ಆಗಿದ್ದು, 822 ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದೆ, 1925 ಅಭ್ಯರ್ಥಿಗಳು ಕಣದಲ್ಲಿದ್ದಾರೆ.ಪಂಚಾಯತ್ ಚುನಾವಣೆಯ ಪ್ರಯುಕ್ತ ಬಂಟ್ವಾಳ ಶ್ರೀ ವೆಂಕಟರಮಣ ದೇವಸ್ಥಾನಕ್ಕೆ ಮಾಜಿ ಸಚಿವ ಬಿ. ರಮಾನಾಥ ರೈ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಮಾಜಿ ಸಚಿವರು ಕಳ್ಳಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ತೊಡಂಬಿಲ ಶಾಲೆಯ ಮತ ಗಟ್ಟೆಯಲ್ಲಿ ಮತ ಚಲಾಯಿಸಿದರು.

Also Read  ಕೇಂದ್ರ ಸರ್ಕಾರದವತಿಯಿಂದ ಸಣ್ಣ ಮತ್ತು ಅತಿಸಣ್ಣ ರೈತರಿಗಾಗಿ ಜಾರಿಗೆ ತರಲಾದ ➤ ಪ್ರಧಾನ ಮಂತ್ರಿ ಕಿಸಾನ್ ಮಾನ್ ಧನ್ ಯೋಜನೆ

error: Content is protected !!
Scroll to Top