ಅಂತರಾಷ್ಟ್ರೀಯ ಪ್ರಯಾಣಿಕರಿಗೆ ಆರ್.ಟಿ.-ಪಿ.ಸಿ.ಆರ್. ಪರೀಕ್ಷೆ ಕಡ್ಡಾಯ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 23. ಇಂಗ್ಲೆಂಡ್ ರಾಷ್ಟ್ರದಲ್ಲಿ ಕೋವಿಡ್-19 ರೋಗದ ಹೊಸ ತಳಿಯ ವೈರಸ್ ಪತ್ತೆಯಾಗಿದ್ದು, ಇದರ ಹರಡುವಿಕೆಯನ್ನು  ತಡೆಯಲು ಇಂಗ್ಲೆಂಡ್‍ ನಿಂದ ಭಾರತಕ್ಕೆ ಬರುವ ಎಲ್ಲಾ ಅಂತಾರಾಷ್ಟ್ರೀಯ ವಿಮಾನವನ್ನು ಈಗಾಗಲೇ ರದ್ದುಪಡಿಸಲಾಗಿದೆ.


ಮಂಗಳೂರು ವಿಮಾನ ನಿಲ್ದಾಣದಲ್ಲಿ  ಬೆಂಗಳೂರು, ಮಹಾರಾಷ್ಟ್ರ, ಹೈದರಬಾದ್, ಮುಂಬೈ, ಚೆನ್ನೈ, ಕೇರಳ ರಾಜ್ಯದಲ್ಲಿರುವ ಅಂತರಾಷ್ಟ್ರೀಯ ವಿಮಾನ ನಿಲ್ದಾಣಗಳ ಮೂಲಕ ದ.ಕ ಜಿಲ್ಲೆಗೆ ಡಿಸೆಂಬರ್ 7 ರಿಂದ ಆಗಮಿಸಿರುವ ಎಲ್ಲಾ ಪ್ರಯಾಣಿಕರ ಪಟ್ಟಿಯನ್ನು ತಯಾರಿಸಿ, ಮುನ್ನೆಚ್ಚರಿಕಾ ಕ್ರಮಗಳನ್ನು ಅನುಸರಿಸಲಾಗುವುದು. ಜಿಲ್ಲೆಗೆ ಆಗಮಿಸಿರುವ ಪ್ರಯಾಣಿಕರು ತಮ್ಮ ವಿವರಗಳನ್ನು ಸಮೀಪದ ಪ್ರಾಥಮಿಕ ಆರೋಗ್ಯ ಕೇಂದ್ರ, ನಗರ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆ, ಜಿಲ್ಲಾ ವೆನ್ಲಾಕ್ ಆಸ್ಪತ್ರೆ ಮಂಗಳೂರು ಇಲ್ಲಿಗೆ ಸ್ವಯಂ ಪ್ರೇರಿತವಾಗಿ ಬಂದು, ಕಡ್ಡಾಯವಾಗಿ ಆರ್.ಟಿ.-ಪಿ.ಸಿ.ಆರ್. ಪರೀಕ್ಷೆಗೆ ಒಳಪಡಿಸಬೇಕು. ಸಾರ್ವಜನಿಕರು ತಮ್ಮ ವ್ಯಾಪ್ತಿಯ ವೈದ್ಯಾಧಿಕಾರಿಗಳು, ಆರೋಗ್ಯ ಕಾರ್ಯಕರ್ತರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರ ಮೂಲಕ ವಿದೇಶದಿಂದ ಆಗಮಿಸಿರುವ ವ್ಯಕ್ತಿಗಳು ಇದ್ದಲ್ಲಿ ತಕ್ಷಣ ಇಲಾಖೆಯ ಗಮನಕ್ಕೆ ತರಬೇಕು.

Also Read  ಗುರು ಪಟ್ಟಾಭಿಷೇಕಕ್ಕೆ ಒಂದು ತಿಂಗಳು ಇರುವಾಗಲೇ ► ಶಿವಮೊಗ್ಗದಲ್ಲಿ ನೇಣಿಗೆ ಶರಣಾದ ಉಜಿರೆಯ ಕ್ರೈಸ್ತ ಪಾದ್ರಿ!


ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ (9449843050), ನೋಡಲ್ ಅಧಿಕಾರಿ ಕೋವಿಡ್-19(9972343984), ಜಿಲ್ಲಾ ಸರ್ವೇಕ್ಷಣಾಧಿಕಾರಿ (9448887706), ಹಾಗೂ ತಾಲೂಕು ಆರೋಗ್ಯಾಧಿಕಾರಿಗಳಾದ ಮಂಗಳೂರು (9448151928), ಬಂಟ್ವಾಳ (9845838677), ಬೆಳ್ತಂಗಡಿ (9845967576), ಪುತ್ತೂರು (9448445853), ಸುಳ್ಯ(9449662224) ಅಧಿಕಾರಿಗಳನ್ನು ಸಂರ್ಪಕಿಸಬಹುದು ಎಂದು ದ.ಕ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ಗೂನಡ್ಕ ಶ್ರೀ ಶಾರದಾ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ನೂತನ ಸಮುದಾಯ ಭವನ ಕಟ್ಟಡ ಉದ್ಘಾಟನೆ

error: Content is protected !!
Scroll to Top