ಕಾಲಿಗೆ ಸರಪಳಿ ಬಿಗಿದು ಪದ್ಮಾಸನ ಭಂಗಿಯಲ್ಲಿ ಈಜಾಟ ➤ ಹೊಸ ದಾಖಲೆ ಬರೆದ ಶಿಕ್ಷಕ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.23: ಪದ್ಮಾಸನ ಭಂಗಿಯಲ್ಲಿ ಕಾಲಿಗೆ ಸರಪಳಿ ಸಹಿತ ಬೀಗ ಹಾಕಿಕೊಂಡು ಸಮುದ್ರದಲ್ಲಿ ಒಂದು ಕಿ.ಮೀ. ಈಜಿದ ಶಿಕ್ಷಕ ನಾಗರಾಜ್ ಖಾರ್ವಿಯವರು ಇಂಡಿಯಾ ಬುಕ್ ಆಫ್ ರೆಕಾರ್ಡ್ ನಲ್ಲಿ ದಾಖಲೆ ಬರೆದಿದ್ದಾರೆ.ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕುಂಚುಗೋಡು ನಿವಾಸಿಯಾಗಿರುವ ನಾಗರಾಜ ಖಾರ್ವಿಯವರು ಬಂಟ್ವಾಳ ತಾಲೂಕಿನ ಕಲ್ಮಂಜದ ಸ.ಹಿ.ಪ್ರಾಥಮಿಕ ಶಾಲೆಯಲ್ಲಿ ಪದವೀಧರ ಶಿಕ್ಷಕರಾಗಿದ್ದಾರೆ.

 

ಈಜಿನ ಮೂಲಕ ಹಲವಾರು ಸಾಹಸವನ್ನು ಮಾಡಿರುವ ಶಿಕ್ಷಕ ನಾಗರಾಜ ಖಾರ್ವಿಯವರು ತಣ್ಣೀರು ಬಾವಿಯ ಅರಬ್ಬಿ ಸಮುದ್ರದಲ್ಲಿ ಶುಕ್ರವಾರ ಬೆಳಗ್ಗೆ 8:55 ಕ್ಕೆ ಅವರು 25 ನಿಮಿಷ 16 ಸೆಕೆಂಡಿನಲ್ಲಿ ಈ ದಾಖಲೆಯನ್ನು ಮಾಡಿದ್ದಾರೆ.ಈ ಸಂದರ್ಭದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪ ನಿರ್ದೇಶಕ ಪ್ರದೀಪ್ ಡಿಸೋಜ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಮಲ್ಲೇಸ್ವಾಮಿ ಉಪಸ್ಥಿತರಿದ್ದರು.ನಾಗರಾಜ್ ಅವರು ಕಳೆದ ಜನವರಿಯಲ್ಲಿ ಗುಜಾರಾತಿನ ವಡೋದರದಲ್ಲಿ ನಡೆದ ರಾಷ್ಟ್ರಮಟ್ಟದ ಮಾಸ್ಟರ್ಸ್ ಈಜು ಸ್ಪರ್ಧೆಯಲ್ಲಿ ಎರಡು ಚಿನ್ನದ ಪದಕ ಮತ್ತು ಒಂದು ಕಂಚಿನ ಪದಕ ಗಳಿಸಿದ್ದರು. ಈಜು ಗುರುಗಳಾದ ಬಿ.ಕೆ. ನಾಯ್ಕ್ ರವರ ಮಾರ್ಗದರ್ಶನದಲ್ಲಿ ತರಬೇತಿ ಪಡೆದು ಈ ಸಾಧನೆಯನ್ನು ಮಾಡಿದ್ದಾರೆ. ಇಂಡಿಯಾ ಬುಕ್ ಆಫ್ ರೆಕಾರ್ಡ್ ನಲ್ಲಿ ರಾಷ್ಟ್ರೀಯ ದಾಖಲೆ ನಿರ್ಮಿಸುವ ಸಲುವಾಗಿ ಹಾಗೂ ಈಜು ಮತ್ತು ಯೋಗದ ಪ್ರಾಮುಖ್ಯವನ್ನು ಜನರಿಗೆ ತಿಳಿಸುವ ಉದ್ದೇಶದಿಂದ ಈ ಸಾಹಸವನ್ನು ಕೈಗೆತ್ತಿಕೊಂಡಿದ್ದಾರೆ.

Also Read  ಕುಂದಾಪುರ: ಬೇಟೆಯಾಡಲು ಕಾಡಿಗೆ ಅಕ್ರಮ ಪ್ರವೇಶ ಮಾಡಿದ ವಾಹನ ಪೊಲೀಸರ ವಶಕ್ಕೆ

error: Content is protected !!
Scroll to Top