ಉಳ್ಳಾಲ: ಬಿಜೆಪಿ ಕಾರ್ಯಕರ್ತ ಝುಬೈರ್ ಕೊಲೆ ಪ್ರಕರಣ ► ಆರೋಪಿಗಳ ಬಂಧನ

 (ನ್ಯೂಸ್ ಕಡಬ) newskadaba.com ಮಂಗಳೂರು, ಅ.12. ಬಿಜೆಪಿ ಕಾರ್ಯಕರ್ತ ಝುಬೈರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಸುಹೈಲ್, ನಿಜಾಮುದ್ದೀನ್, ಮಹಮ್ಮದ್ ಮುಸ್ತಫಾ, ತಾಜುದ್ದೀನ್ ಮತ್ತು ಆಸಿಫ್ ಬಂಧಿತ ಆರೋಪಿಗಳಾಗಿದ್ದು, ಹಳೇ ದ್ವೇಷದಿಂದ ಝುಬೈರ್ ನನ್ನು ಕೊಲೆ ಮಾಡಲಾಗಿದೆ ಎಂದು ವಿಚಾರಣೆ ವೇಳೆ ತಿಳಿದು ಬಂದಿದೆ. ಕೊಲೆಗೆ ಸಂಚು ರೂಪಿಸಿದ್ದ ಇನ್ನೂ ಮೂವರು ಆರೋಪಿಗಳಿಗೆ ಶೋಧ ನಡೆಯುತ್ತಿದೆ. ರೌಡಿಸಂ ಮಟ್ಟ ಹಾಕಲು ಎರಡು ತಂಡಗಳ ರಚನೆಯಾಗಿದ್ದು, ಶೀಘ್ರದಲ್ಲಿ ಆರೋಪಿಗಳನ್ನು ಮಟ್ಟ ಹಾಕಲಿದ್ದೇವೆ ಎಂದು ಪೊಲೀಸ್ ಕಮಿಷನರ್ ಟಿ.ಆರ್ ಸುರೇಶ್ ಹೇಳಿದ್ದಾರೆ.

Also Read  ದೀಪಾವಳಿ ಹಬ್ಬಕ್ಕೆ ಗುಡ್ ನ್ಯೂಸ್; ಹುಬ್ಬಳ್ಳಿ- ಮಂಗಳೂರು ನಡುವೆ ವಿಶೇಷ ರೈಲು ಸಂಚಾರ

ಅಕ್ಟೋಬರ್ 4ರ ಸಂಜೆ ಉಳ್ಳಾಲದ ಮುಕ್ಕಚ್ಚೇರಿ ಮಸೀದಿ ಬಳಿ ಜುಬೇರ್ ಮತ್ತು ಇಲಿಯಾಸ್ ಎಂಬ ಇಬ್ಬರು ನಿಂತಿದ್ದಾಗ ನಾಲ್ವರ ತಂಡ ಮಚ್ಚು ಲಾಂಗ್ ಗಳಿಂದ ದಾಳಿ ನಡೆಸಿತ್ತು. ತೀವ್ರವಾಗಿ ಗಾಯಗೊಂಡ ಜುಬೇರ್ ಅವರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದರು.

error: Content is protected !!
Scroll to Top