ರಮೇಶ್ ಅರವಿಂದ್ ಮನೆಯಲ್ಲಿ ಪುತ್ರಿಯ ಮದುವೆ ಸಂಭ್ರಮ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.26: ಖ್ಯಾತ ನಟ ರಮೇಶ್ ಅರವಿಂದ್ ಮನೆಯಲ್ಲಿ ಮದುವೆ ಸಂಭ್ರಮ. ರಮೇಶ್ ಅರವಿಂದ್ ಹಾಗೂ ಅರ್ಚನಾ ದಂಪತಿಗಳ ಪುತ್ರಿ ನಿಹಾರಿಕ ಅವರ ಮದುವೆ ಅಕ್ಷಯ್ ಅವರೊಂದಿಗೆ ಇದೇ ಡಿಸೆಂಬರ್ 28 ರಂದು ನಡೆಯಲಿದೆ. ‌ನಿಹಾರಿಕ ಹಾಗೂ ಅಕ್ಷಯ್ ಒಂದೇ ಸಂಸ್ಥೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಈಗ ನವಜೀವನಕ್ಕೆ ಅಡಿಯಿಡುತ್ತಿದ್ದಾರೆ.

ಇವರ ವಿವಾಹ ಮಹೋತ್ಸವ ಎರಡು ಕುಟಂಬಗಳ ಸದಸ್ಯರ ಸಮ್ಮುಖದಲ್ಲಿ ಕೋವಿಡ್ 19 ನಿಯಮಾನುಸಾರ ನಡೆಯಲಿದೆ. ಜನವರಿ ಎರಡನೇ ವಾರದಲ್ಲಿ ಆರತಕ್ಷತೆ ಆಯೋಜಿಸಲಾಗಿದ್ದು, ಅಂದು ಚಿತ್ರರಂಗ‌ ಸೇರಿದಂತೆ ಎಲ್ಲಾ ಕ್ಷೇತ್ರಗಳ ಗಣ್ಯರನ್ನು ಆಹ್ವಾನಿಸಲಾಗುತ್ತಿದೆ.ನಾನು ಚಿತ್ರರಂಗಕ್ಕೆ ಬಂದ ದಿನದಿಂದಲೂ‌ ಕರ್ನಾಟಕದ ಜನತೆ, ಚಿತ್ರರಸಿಕರು ಹಾಗೂ ಮಾಧ್ಯಮದವರು ನೀಡಿರುವ ಪ್ರೋತ್ಸಾಹ ಅಷ್ಟಿಷ್ಟಲ್ಲ.‌ ನಿಮ್ಮ ಪ್ರೀತಿಯ ಆಶೀರ್ವಾದ ಮದುಮಕ್ಕಳ ಮೇಲೆ ಸದಾ ಇರಲಿ ಎಂದು ರಮೇಶ್ ಅರವಿಂದ್ ಮನವಿ ಮಾಡಿದ್ದಾರೆ.

Also Read  ಕಾಸರಗೋಡು: ಕೊಲೆ ಬೆದರಿಕೆ ಪ್ರಕರಣ ➤ ಆರೋಪಿ ಖಾಕಿ ಬಲೆಗೆ

 

 

error: Content is protected !!
Scroll to Top