(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.12. 2014ರ ಲೋಕಸಭಾ ಚುನಾವಣಾ ವೇಳೆ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇಲೆ ಕೇಂದ್ರ ಸಚಿವ ಸದಾನಂದ ಗೌಡ ವಿರುದ್ಧ ಹಾಕಲಾಗಿದ್ದ ಎಫ್ಐಆರ್ ಅನ್ನು ಹೈಕೋರ್ಟ್ ನ್ಯಾ. ಅರವಿಂದ ಕುಮಾರ್ ಅವರಿದ್ದ ಏಕಸದಸ್ಯ ಪೀಠದಿಂದ ರದ್ದುಗೊಳಿಸಿದೆ.
ಎಫ್ಐಆರ್ ಅನ್ನು ರದ್ದುಗೊಳಿಸುವಂತೆ ಕೋರಿ ಜೆಎಂಎಫ್ ಸಿ ನ್ಯಾಯಾಲಯದಲ್ಲಿ ಸದಾನಂದ ಗೌಡ ಅವರು ಅರ್ಜಿ ಸಲ್ಲಿಸಿದ್ದರು.
ಚುನಾವಣೆ ಪ್ರಚಾರ ಅವಧಿ ಮುಗಿದ ಮೇಲೂ ಪ್ರಚಾರ ಮಾಡಿದರು ಎಂದು ಆರೋಪಿಸಿ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎಫ್ಐಆರ್ ದಾಖಲಾಗಿತ್ತು. ಈ ಸಂಬಂಧ ಮಂಗಳೂರು ಜೆಎಂಎಫ್ ಸಿ ನ್ಯಾಯಾಲಯದಲ್ಲಿ ಅರ್ಜಿ ವಿಚಾರಣೆ ನಡೆಯುತ್ತಿತ್ತು. ಹೀಗಾಗಿ ಪ್ರಕರಣ ರದ್ದು ಕೋರಿ ಡಿ.ವಿ.ಸದಾನಂದಗೌಡ ಹೈಕೋರ್ಟ್ ಮೆಟ್ಟಿಲೇರಿದ್ದರು.