ಸುಳ್ಯ: ಟೆರೇಸ್ ಮೇಲಿಂದ ಬಿದ್ದು ವ್ಯಕ್ತಿ ಗಂಭೀರ

(ನ್ಯೂಸ್ ಕಡಬ) newskadaba.com ಸುಳ್ಯ, ಜ. 01. ಮನೆಯ ಟೆರೇಸ್ ಮೇಲಿಂದ ಬಿದ್ದು ವ್ಯಕ್ತಿಯೋರ್ವರು ಗಂಭೀರ ಗಾಯಗೊಂಡ ಘಟನೆ ಸುಳ್ಯದಲ್ಲಿ ನಡೆದಿದೆ.

ಗಾಯಗೊಂಡವರನ್ನು ಸುಳ್ಯದ ಉದ್ಯಮಿ ಸಂತೋಷ್ ಮಡ್ತಿಲ ಎಂದು ಗುರುತಿಸಲಾಗಿದೆ. ದೇವಚಳ್ಳ ಗ್ರಾಮದ ದೇವ ಎಂಬಲ್ಲಿ ಮನೆ ವೀಕ್ಷಣೆಗೆಂದು ತೆರಳಿದ್ದ ವೇಳೆ ಟೆರೇಸ್ ಮೇಲಿಂದ ಬಿದ್ದಿದ್ದು, ಕೂಡಲೇ ಅವರನ್ನು್ು ಸುಳ್ಯದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆ ಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ.

error: Content is protected !!
Scroll to Top