(ನ್ಯೂಸ್ ಕಡಬ) newskadaba.com ಪುತ್ತೂರು, ಜ. 03. ರಸ್ತೆ ದಾಟುತ್ತಿದ್ದ ವೇಳೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಮಹಿಳೆಯೋರ್ವರು ಗಾಯಗೊಂಡ ಘಟನೆ ಪುತ್ತೂರಿನಲ್ಲಿ ನಡೆದಿದೆ.
ಗಾಯಾಳು ಮಹಿಳೆಯನ್ನು ಮೊಟ್ಟೆತ್ತಡ್ಕ ನಿವಾಸಿ ಐರಿನ್ ಡಿಸೋಜಾ ಎನ್ನಲಾಗಿದೆ. ಗಾಯಾಳುವನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.