ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಕಾರು ➤ ಪ್ರಯಾಣಿಕರು ಅಪಾಯದಿಂದ ಪಾರು



(ನ್ಯೂಸ್ ಕಡಬ) newskadaba.com ಹಳೆಯಂಗಡಿ, ಜ. 05. ನದಿ ತೀರದ ರಸ್ತೆಯಲ್ಲಿ ಸಂಚರಿಸುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಘಟನೆ ರಾ.ಹೆದ್ದಾರಿ 66ರ ಪಾವಂಜೆ ಸೇತುವೆ ಬಳಿ ಇಂದು ಬೆಳಗ್ಗೆ ನಡೆದಿದೆ.





ಕೃಷ್ಣಾಪುರ ಕಾಟಿಪಳ್ಳದ ನಿವಾಸಿ ಅಶ್ರಫ್ ಎಂಬವರು ತನ್ನ ಸ್ನೇಹಿತನೊಂದಿಗೆ ಪಾವಂಜೆ ಬಳಿಯ ಅರಾಂದ್ ಎಂಬ ಸ್ಥಳದಿಂದ ಹಿಂದಿರುಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದ್ದು, ಈ ಸಂದರ್ಭ ಪ್ರಯಾಣಿಕರಿಬ್ಬರು ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಕಾರು ನದಿಯಲ್ಲಿ ಮುಳುಗುತ್ತಿದ್ದಂತೆಯೇ ಅಶ್ರಫ್ ಮತ್ತು ಅವರ ಸ್ನೇಹಿತ ಕಾರಿನಿಂದ ಹೊರಬಂದು ಈಜಿ ದಡ ಸೇರುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆಯ ಕುರಿತು ಸುರತ್ಕಲ್ ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.






error: Content is protected !!
Scroll to Top