(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 07. ಜ.17ರಂದು ಕರ್ನಾಟಕ ರಾಜ್ಯದಾದ್ಯಂತ ಪಲ್ಸ್ ಪೋಲಿಯೊ ಕಾರ್ಯಕ್ರಮ ಆಯೋಜಿಸಲಾಗಿದ್ದು, ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪಲ್ಸ್ ಪೋಲಿಯೊ ಲಸಿಕೆ ಹಾಕಿಸಿಕೊಳ್ಳಬೇಕು ಎಂದು ಆರೋಗ್ಯ ಇಲಾಖಾ ವರದಿ ತಿಳಿಸಿದೆ.
ಪೋಲಿಯೊ ವಿರುದ್ಧ ಹೋರಾಟದಲ್ಲಿ ಜಯಗಳಿಸಲು 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಎರಡು ಹನಿ ಪೋಲಿಯೊ ಲಸಿಕೆ ಹಾಕಿಸಬೇಕು. ಯಾವುದೇ ಮಗು ಲಸಿಕೆಯಿಂದ ವಂಚಿತವಾಗದಂತೆ ನೋಡಿಕೊಳ್ಳಬೇಕು ಎಂದು ಆರೋಗ್ಯ ಇಲಾಖೆ ತಿಳಿಸಿದೆ.