ಮಂಗಳೂರು: ಮೀನುಗಾರಿಕೆಯಲ್ಲಿ ತೊಡಗಿದ್ದ ಬೋಟ್ ನಲ್ಲಿ ಸಿಲಿಂಡರ್ ಸ್ಪೋಟ ➤ ಮೀನುಗಾರರ ರಕ್ಷಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜ.11. ಮೀನುಗಾರಿಕೆ ನಡೆಸುತ್ತಿದ್ದ ವೇಳೆ ತಮಿಳುನಾಡು ಮೂಲದ ಬೋಟ್‌ ಒಂದರಲ್ಲಿ ಸಿಲಿಂಡರ್ ಸ್ಪೋಟಗೊಂಡ ಪರಿಣಾಮ ಓರ್ವ ಗಂಭೀರ ಗಾಯಗೊಂಡು ಬೋಟ್‌ನಲ್ಲಿದ್ದ 11 ಮಂದಿ ಮೀನುಗಾರರನ್ನು ಕರಾವಳಿ ರಕ್ಷಣಾ ಪಡೆಯವರು ರಕ್ಷಿಸಿದ ಘಟನೆ ನಡೆದಿದೆ.

ಮಂಗಳೂರಿನಿಂದ ಸುಮಾರು 140 ನಾಟಿಕಲ್ ಮೈಲ್ ದೂರದಲ್ಲಿ ಈ ಬೋಟ್ ಮೀನುಗಾರಿಯಲ್ಲಿ ತೊಡಗಿದ್ದ ವೇಳೆ ಬೋಟ್‌ನಲ್ಲಿದ್ದ ಸಿಲಿಂಡರ್ ಏಕಾಏಕಿ ಸ್ಪೋಟಗೊಂಡಿದ್ದು, ವಿಷಯ ತಿಳಿದ ಕರಾವಳಿ ರಕ್ಷಣಾ ಪಡೆಯವರು ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡು ಬೋಟ್‌ನಲ್ಲಿದ್ದ 11 ಮಂದಿಯನ್ನು ರಕ್ಷಿಸಿದ್ದಾರೆ. ಗಂಭೀರ ಗಾಯಗೊಂಡವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

Also Read  ಬೆಳ್ತಂಗಡಿ: ಅಕ್ರಮವಾಗಿ ದಾಸ್ತಾನಿರಿಸಿದ್ದ ಗೋಡೌನ್ ಮೇಲೆ ತಹಶೀಲ್ದಾರ್ ದಾಳಿ ➤ ಆರೋಪಿ ಸಹಿತ 37.5 ಕ್ವಿಂಟಾಲ್ ಅಕ್ಕಿ ವಶ

error: Content is protected !!
Scroll to Top