ಅಂಕೋಲಾ: ಭೀಕರ ರಸ್ತೆ ಅಪಘಾತ ➤ ಕೇಂದ್ರ ಸಚಿವ ಶ್ರೀಪಾದ್ ನಾಯಕ್ ಪತ್ನಿ ಮೃತ್ಯು



(ನ್ಯೂಸ್ ಕಡಬ) newskadaba.com ಅಂಕೋಲಾ, ಜ.11. ಕೇಂದ್ರ ಸಚಿವ ಶ್ರೀಪಾದ್ ನಾಯಕ್ ರ ಪತ್ನಿ ಹಾಗೂ ಸಚಿವರ ಆಪ್ತ ಸಹಾಯಕ ಸೋಮವಾರ ರಾತ್ರಿ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.





ಕೇಂದ್ರ ಆಯುಷ್ ಸಚಿವ ಶ್ರೀಪಾದ್ ನಾಯಕ್ ಅವರ ಕಾರು ಯಲ್ಲಾಪುರದಿಂದ ಗೋಕರ್ಣ ಕಡೆಗೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಉತ್ತರ ಕನ್ನಡ ಜಿಲ್ಲೆಯ ಹೊಸಕಂಬಿ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಶ್ರೀಪಾದ್ ನಾಯಕ್ ಅವರ ಪತ್ನಿ ವಿಜಯ ನಾಯಕ್ ಸ್ಥಳದಲ್ಲೇ ಮೃತಪಟ್ಟಿದ್ದು, ಆಪ್ತ ಸಹಾಯಕ ಆಸ್ಪತ್ರೆಗೆ ಸಾಗಿಸುವ ಹಾದಿ ಮಧ್ಯೆ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಸಚಿವ ಶ್ರೀಪಾದ್ ನಾಯಕ್ ಸೇರಿದಂತೆ ಮೂವರು ಗಾಯಗೊಂಡಿದ್ದಾರೆ.






error: Content is protected !!
Scroll to Top