(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 13. ರಾಜ್ಯ ಸಂಪುಟದ ಅಬಕಾರಿ ಸಚಿವರಾಗಿ ಸುಳ್ಯ ಶಾಸಕ ಎಸ್.ಅಂಗಾರ ಅವರು ಇಂದು ಬೆಂಗಳೂರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ರಾಜಭವನದಲ್ಲಿ ನಡೆದ ಈ ಸಮಾರಂಭದಲ್ಲಿ ರಾಜ್ಯಪಾಲ ವಾಜುಬಾಯ್ ವಾಲಾ ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ಆರು ಬಾರಿ ಶಾಸಕರಾಗಿ ಆಯ್ಕೆಯಾದ ಇವರು, ಪ್ರಥಮ ಬಾರಿಗೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು, ಜೊತೆಗೆ ಉಳಿದ ಆರು ಮಂದಿ ಸಚಿವರು ಪ್ರಮಾಣವಚಬ ಸ್ವೀಕರಿಸಿದರು.