ಪಲ್ಸ್ ಪೊಲಿಯೋ ಕಾರ್ಯಕ್ರಮ ಜ.31ಕ್ಕೆ ಮುಂದೂಡಿಕೆ ➤ ಆರೋಗ್ಯ ಇಲಾಖೆ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ನವದೆಹಲಿ, ಜ. 14. ದೇಶದಾದ್ಯಂತ ಜನವರಿ 17ರಂದು ನಿಗದಿಯಾಗಿದ್ದ ರಾಷ್ಟ್ರೀಯ ಪಲ್ಸ್‌ ಪೋಲಿಯೊ ಲಸಿಕೆ ಕಾರ್ಯಕ್ರಮವನ್ನು ಜನವರಿ 31ಕ್ಕೆ ಮುಂದೂಡಲಾಗಿದೆ.


ಜನವರಿ 16ರಂದು ‘ಕೋವಿಡ್‌ 19’ ವಿರುದ್ಧದ ಲಸಿಕೆ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಚಾಲನೆ ನೀಡುತ್ತಿದ್ದು, ಈ ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಸಚಿವಾಲಯ, ರಾಷ್ಟ್ರಪತಿ ಕಚೇರಿಯೊಂದಿಗೆ ಸಮಾಲೋಚಿಸಿ ಪೋಲಿಯೊ ಲಸಿಕಾ ದಿನವನ್ನು ಜನವರಿ 31 ಕ್ಕೆ ಮುಂದೂಡಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

Scroll to Top