(ನ್ಯೂಸ್ ಕಡಬ) newskadaba.com ಧಾರವಾಡ, ಜ. 15. ಟೆಂಪೋ ಹಾಗೂ ಲಾರಿಯ ನಡುವೆ ಢಿಕ್ಕಿ ಸಂಭವಿಸಿದ ರಸ್ತೆ ಅಪಘಾತದಲ್ಲಿ 11 ಮಂದಿ ಮೃತಪಟ್ಟ ಘಟನೆ ತಾಲ್ಲೂಕಿನ ಇಟಿಗಟ್ಟಿ ಬಳಿ ಶುಕ್ರವಾರ ನಸುಕಿನ ಜಾವ ನಡೆದಿದೆ.

ದಾವಣಗೆರೆಯಿಂದ ಹೊರಟಿದ್ದ ಟೆಂಪೋ ಹಾಗೂ ಲಾರಿ ನಡುವೆ ಧಾರವಾಡ ಸಮೀಪ ಈ ಅಪಘಾತ ಸಂಭವಿಸಿದೆ. ಮೃತರ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ.













