(ನ್ಯೂಸ್ ಕಡಬ) newskadaba.com ಮುಂಬೈ, ಜ. 15. ಇತ್ತೀಚಿನ ದಿನಗಳಲ್ಲಿ ಹೆಚ್ಚಿದ ಲೋನ್ ಆಪ್ ಗಳಿಂದಾಗಿ ಗ್ರಾಹಕರಿಗೆ ಕಿರುಕುಳ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಇದಕ್ಕೆಲ್ಲ ಕಡಿವಾಣ ಹಾಕಬೇಕೆಂಬ ಒತ್ತಾಯ ಕೇಳಿಬಂದಿದೆ.
ಬಳಕೆದಾರರ ದೂರುಗಳು ಮತ್ತು ಸರ್ಕಾರ ನೀಡಿದ ಎಚ್ಚರಿಕೆಯ ನೆಲೆಯಲ್ಲಿ ವೈಯಕ್ತಿಕ ಲೋಲ್ ಆಪ್ ಗಳನ್ನು ಪ್ಲೇಸ್ಟೋರ್ ನಿಂದ ತೆಗೆದು ಹಾಕಲಾಗಿದೆ. ಗ್ರಾಹಕರ ಸುರಕ್ಷತಾ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಗೂಗಲ್ ತಿಳಿಸಿದೆ. ಇಂತಹ ಆ್ಯಪ್ ಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ತಜ್ಞರ ಸಮಿತಿಯನ್ನು ರಚನೆ ಮಾಡಿ ವರದಿ ನೀಡುವಂತೆ ಸೂಚಿಸಿದೆ. ಕಿರುಕುಳದ ದೂರುಗಳು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಆರ್ ಬಿ ಐ ಈ ಕ್ರಮ ಕೈಗೊಂಡಿದೆ ಎನ್ನಲಾಗಿದೆ.