(ನ್ಯೂಸ್ ಕಡಬ) newskadaba.com ಮೈಸೂರು, ಅ.15. ಕಾರೊಂದು ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಪತ್ರಕರ್ತ ಸೇರಿದಂತೆ ಇಬ್ಬರು ಮೃತಪಟ್ಟ ಘಟನೆ ಭಾನುವಾರ ಸಂಜೆ ತಿ.ನರಸೀಪುರ ಸಮೀಪದ ತಲಕಾಡು ಎಂಬಲ್ಲಿ ನಡೆದಿದೆ.
ಮೃತರನ್ನು ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಸದಸ್ಯ, ವಿಜಯವಾಣಿ ಪತ್ರಿಕೆಯ ಉಪ ಸಂಪಾದಕ ಎಂ.ಜಿ. ರಾಜೇಶ್ ಹಾಗೂ ಸಂಬಂಧಿ ಮಹಿಮಾ ಎಂದು ಗುರುತಿಸಲಾಗಿದೆ. ಇವರು ತನ್ನ ಕುಟುಂಬ ಸದಸ್ಯರೊಂದಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದಿದ್ದರಿಂದ ಈ ದುರ್ಘಟನೆ ಸಂಭವಿಸಿದೆ.