ತರಬೇತಿ ಕಾರ್ಯಾಗಾರ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 16. ಕಾರ್ಮಿಕ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ವಕೀಲರ ಸಂಘ, ದ.ಕ. ಜಿಲ್ಲೆ, ಮಂಗಳೂರು ಇದರ ಜಂಟಿ ಆಶ್ರಯದಲ್ಲಿ ಕಾರ್ಮಿಕ ಇಲಾಖೆಯ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗಳಿಗೆ ವಿವಿಧ ಕಾರ್ಮಿಕ ಕಾಯ್ದೆ ಹಾಗೂ ಯೋಜನೆಗಳ ಬಗ್ಗೆ ಒಂದು ದಿನದ ತರಬೇತಿ ಕಾರ್ಯಾಗಾರವನ್ನು ಕರ್ನಾಟಕ ಬ್ಯಾಂಕ್ ನೌಕರರ ಸಭಾ ಭವನ, ಬಿಜೈ, ಮಂಗಳೂರು ಇಲ್ಲಿ ಜನವರಿ 12 ರಂದು ಅಯೋಜಿಸಲಾಯಿತು.


ಕಾರ್ಯಕ್ರಮವನ್ನು ಗೌರವಾನ್ವಿತ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿಗಳು, ಜಿಲ್ಲಾ ಸೇವೆಗಳ ಕಾನೂನು ಸೇವೆಗಳ ಪ್ರಾಧಿಕಾರ, ದ.ಕ ಜಿಲ್ಲೆ, ಮಂಗಳೂರು ಎ.ಜೆ. ಶಿಲ್ಪಾ ಉದ್ಘಾಟಿಸಿದರು. ಉಪಕಾರ್ಮಿಕ ಆಯುಕ್ತರು, ಹಾಸನ ಪ್ರಾದೇಶಿಕ, ವಿ. ಸೋಮಣ್ಣ, ಅಧ್ಯಕ್ಷತೆ ವಹಿಸಿದರು. ಸಹಾಯಕ ಕಾರ್ಮಿಕ ಆಯುಕ್ತರು, ಮಂಗಳೂರು ವಿಭಾಗ, ಕೆ.ಬಿ ನಾಗರಾಜ್, ಪ್ರಸ್ತಾವಿಕ ಭಾಷಣವನ್ನು ಮಾಡಿದರು.

Also Read  ರಾಜ್ಯದಲ್ಲಿ ಬೇಸಿಗೆಯಲ್ಲಿ ವಿದ್ಯುತ್‌ ತೊಂದರೆಯಾಗಲ್ಲ: ಕೆಪಿಟಿಸಿಎಲ್ ಎಂಡಿ

error: Content is protected !!
Scroll to Top