ತೊಕ್ಕೊಟ್ಟು ಬೀಫ್ ಸ್ಟಾಲ್ ಗಳಿಗೆ ಬೆಂಕಿ ಹಚ್ಚಿದ ಪ್ರಕರಣ ➤ ಆರೋಪಿ ಅರೆಸ್ಟ್



(ನ್ಯೂಸ್ ಕಡಬ) newskadaba.com ಮಂಗಳೂರು, ಜ. 16. ಕಳೆದ ವಾರ ತೊಕ್ಕೊಟ್ಟು ಎಂಬಲ್ಲಿ ಬೀಫ್ ಸ್ಟಾಲ್ ಗಳಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.





ಬಂಧಿತ ಆರೋಪಿಯನ್ನು ತೊಕ್ಕೊಟ್ಟು ಒಳಪೇಟೆ ನಿವಾಸಿ ನಾಗರಾಜ (37) ಎಂದು ಗುರುತಿಸಲಾಗಿದೆ. ಆರೋಪಿಯು ಇದೇ ಬೀಫ್ ಸ್ಟಾಲ್‌ ನಿಂದ ಹಲವು ಬಾರಿ ಮಾಂಸ ಖರೀದಿಸಿ ತನ್ನ ಸ್ನೇಹಿತನ ಮನೆಯಲ್ಲಿ ಅಡುಗೆ ಮಾಡಿ ಸೇವಿಸುತ್ತಿದ್ದನು. ಈ ಹಿಂದೆ ಮಾಂಸದಂಗಡಿಯ ಮಾಲಕರ ಜೊತೆ ನಿಗದಿತ ಬೆಲೆಗಿಂತ ಅಧಿಕ ಮಾಂಸ ನೀಡುವಂತೆ ಒತ್ತಾಯಿಸಿದ್ದನು. ಈ ವೇಳೆ ಹಣ ಕೊಟ್ಟಷ್ಟೇ ಮಾಂಸ ನೀಡುವುದಾಗಿ ಅಂಗಡಿಯಾತ ಹೇಳಿದ್ದಾನೆ. ಇದರಿಂದ ಕೋಪಗೊಂಡ ಆರೋಪಿ ಈ ದುಷ್ಕೃತ್ಯವೆಸಗಿದ್ದಾನೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.






error: Content is protected !!
Scroll to Top