ರಸ್ತೆ ಬದಿ ನಿಂತಿದ್ದ ಬೈಕ್ ಗೆ ಬಸ್ ಢಿಕ್ಕಿ ➤ ಶಿಕ್ಷಕ ಮೃತ್ಯು

(ನ್ಯೂಸ್ ಕಡಬ) newskadaba.com ಕಾರ್ಕಳ, ಜ. 17. ರಸ್ತೆ ಬದಿ ಬೈಕ್ ನಿಲ್ಲಿಸಿ ಮೊಬೈಲ್ ಸಂಭಾಷಣೆಯಲ್ಲಿದ್ದ ವ್ಯಕ್ತಿಗೆ ಬಸ್ ಢಿಕ್ಕಿ ಹೊಡೆದ ಪರಿಣಾಮ ಮೃತಪಟ್ಟ ಘಟನೆ ನಿಟ್ಟೆ ಗ್ರಾಮದ ಫಾರೆವರ್ ಎಂಬಲ್ಲಿ ನಡೆದಿದೆ.

ಮೃತರನ್ನು ನಿಟ್ಟೆ ಗ್ರಾಮದ ವಸಂತ ದೇವಾಡಿಗ (45) ಎಂದು ಗುರುತಿಸಲಾಗಿದೆ. ಇವರು ಶನಿವಾರದಂದು ನಿಟ್ಟೆ ಗ್ರಾಮದ ಫಾರೆವರ್ ಸಮೀಪ ರಸ್ತೆ ಬದಿ ಬೈಕ್ ನಿಲ್ಲಿಸಿ ಫೋನ್‌ ನಲ್ಲಿ ಮಾತನಾಡುತ್ತಿದ್ದ ವೇಳೆ ಕಾರ್ಕಳ ಕಡೆಯಿಂದ ಪಡುಬಿದ್ರೆ ಕಡೆಗೆ ಸಾಗುತ್ತಿದ್ದ ಖಾಸಗಿ ಬಸ್ಸೊಂದು ರಸ್ತೆಯ ಎಡ ಭಾಗಕ್ಕೆ ಬಂದು ನಿಂತಿದ್ದ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್‌ನಲ್ಲಿ ಕೂತು ಮಾತನಾಡುತ್ತಿದ್ದ ಶಿಕ್ಷಕ ವಸಂತ ದೇವಾಡಿಗ ಅವರು ರಸ್ತೆಗೆಸೆಯಲ್ಪಟ್ಟು, ಗಂಭೀರ ಗಾಯಗೊಂಡಿದ್ದ ಇವರನ್ನು ತಕ್ಷಣ ಕಾರ್ಕಳದ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದೆ ಅಲ್ಲಿ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಕುರಿತು ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  7, 8, 9ನೇ ತರಗತಿ ವಿದ್ಯಾರ್ಥಿಗಳು ಪರೀಕ್ಷೆ ಇಲ್ಲದೇ ಪಾಸ್, ಎಸೆಸೆಲ್ಸಿ ಪರೀಕ್ಷೆ ವೇಳಾಪಟ್ಟಿ ಎ.14ರ ನಂತರ ತೀರ್ಮಾನ: ಸಚಿವ ಸುರೇಶ್ ಕುಮಾರ್

error: Content is protected !!
Scroll to Top