(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 18. ಗಣರಾಜ್ಯೋತ್ಸವದಂದು ಲಾಲ್ ಭಾಗ್ ನಲ್ಲಿ ನಡೆಯುತ್ತಿದ್ದ ಫಲಪುಷ್ಪ ಪ್ರದರ್ಶನವನ್ನು ಈ ವರ್ಷ ರದ್ದು ಮಾಡಲಾಗಿದೆ.
ಮುಖ್ಯಮಂತ್ರಿಯವರು ಎರಡು ದಿನಗಳ ಮೊದಲು ಫಲಪುಷ್ಪ ಪ್ರದರ್ಶನಕ್ಕೆ ಅನುಮತಿ ನೀಡಿದ್ದರಾದರೂ ಬಿಬಿಎಂಪಿ ಅನುಮತಿ ನಿರಾಕರಣೆ ಮಾಡಿದ ಹಿನ್ನೆಲೆ ಇದನ್ನು ರದ್ದು ಮಾಡಲಾಗಿದೆ. 2021ರ ಸ್ವಾತಂತ್ರ್ಯೋತ್ಸವ ವೇಳೆ ಈ ಫಲಪುಷ್ಪ ಪ್ರದರ್ಶನವನ್ನು ಆಯೋಜಿಸಲು ನಿರ್ಧರಿಸಲಾಗಿದೆ.