ಸುಬ್ರಹ್ಮಣ್ಯ: ಬಸ್ ನಲ್ಲಿ ಬಿಟ್ಟುಹೋದ ಬ್ಯಾಗನ್ನು ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಕೆಎಸ್ಸಾರ್ಟಿಸಿ ಚಾಲಕ ಮತ್ತು ನಿರ್ವಾಹಕ

(ನ್ಯೂಸ್ ಕಡಬ) newskadaba.com ಸುಬ್ರಮಣ್ಯ, ಜ. 18. ಪ್ರಯಾಣಿಕರೋರ್ವರು ಬಸ್ಸಿನಲ್ಲಿ ಮರೆತು ಹೋಗಿದ್ದ ಬ್ಯಾಗನ್ನು ಅದರ ವಾರಸುದಾರರಿಗೆ ಹಿಂತಿರುಗಿಸುವ ಮೂಲಕ ಕೆಎಸ್​.ಆರ್​.ಟಿಸಿ ಚಾಲಕ ಮತ್ತು ನಿರ್ವಾಹಕ ಪ್ರಾಮಾಣಿಕತೆ ಮೆರೆದಿದ್ದಾರೆ.


ಜನವರಿ 16 ರಂದು ಸುಬ್ರಹ್ಮಣ್ಯ ರೈಲ್ವೇ ನಿಲ್ದಾಣದಿಂದ ಧರ್ಮಸ್ಥಳಕ್ಕೆತೆರಳುತ್ತಿದ್ದ ಪ್ರಯಾಣಿಕರೋರ್ವರು ಬೆಲೆಬಾಳುವ ಲ್ಯಾಪ್​-ಟಾಪ್​ ಇದ್ದ ಬ್ಯಾಗನ್ನು ಬಸ್ಸಿನಲ್ಲಿಯೇ ಮರೆತು ಹೋಗಿದ್ದರು. ಇದನ್ನು ಗಮನಿಸಿದ ಚಾಲಕ ಈಸುಬ್​ ಅಲಿ ಮತ್ತು ನಿರ್ವಾಹಕ ಮಂಜು ತಕ್ಷಣವೇ ಪ್ರಯಾಣಿಕನನ್ನು ಹುಡುಕಲು ಆರಂಭಿಸಿದ್ದಾರೆ. ಇವರಿಬ್ಬರ ಪ್ರಯತ್ನದ ಫಲವಾಗಿ ಕೊನೆಗೂ ಬ್ಯಾಗ್​ ಬಿಟ್ಟು ಹೋಗಿದ್ದ ಪ್ರಯಾಣಿಕ ಪತ್ತೆ ಹಚ್ಚಿ, ಬ್ಯಾಗ್ ನ್ನಿ ಹಿಂದಿರುಗಿಸಲಾಯಿತು. ಇವರ ಈ ಕಾರ್ಯಕ್ಕೆ ವ್ಯಾಪಕ ಶ್ಲಾಘನೆ ವ್ಯಕ್ತವಾಗಿದೆ.

Also Read  ಮರ್ಧಾಳ: ನಿಯಂತ್ರಣ ತಪ್ಪಿ ಕಾರು ಪಲ್ಟಿ ➤ ಓರ್ವನಿಗೆ ಗಾಯ

error: Content is protected !!
Scroll to Top