(ನ್ಯೂಸ್ ಕಡಬ) newskadaba.com ಕಡಬ, ಜ. 20. ಗ್ರಾ.ಪಂ. ಚುನಾವಣೆಯ ಬಳಿಕ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಹುದ್ದೆಗಳ ಮೀಸಲಾತಿಯನ್ನು ನಿಗದಿಪಡಿಸಲು ಈ ಹಿಂದೆ ನಿಗದಿಪಡಿಸಲಾಗಿದ್ದ ಸ್ಥಳ ಮತ್ತು ದಿನಾಂಕವನ್ನು ಬದಲಾವಣೆ ಮಾಡಿ ಜಿಲ್ಲಾಧಿಕಾರಿಗಳು ಆದೇಶ ನೀಡಿದ್ದಾರೆ.
ಕಡಬ ಹಾಗೂ ಸುಳ್ಯ ತಾಲೂಕಿನ ಮೀಸಲಾತಿ ಪ್ರಕ್ರಿಯೆಯನ್ನು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜ.23ಕ್ಕೆ ಎಂದು ಆದೇಶ ನೀಡಲಾಗಿತ್ತು. ಇದಕ್ಕೆ ಜನಪ್ರತಿನಿಧಿಗಳು ವಿರೋಧಿಸಿ ಮೀಸಲಾತಿ ಪ್ರಕ್ರಿಯೆಯನ್ನು ಆಯಾ ತಾಲೂಕುಗಳಲ್ಲಿ ಮಾಡಬೇಕು ಎನ್ನುವ ಒತ್ತಾಯದ ಹಿನ್ನೆಲೆ, ಮೀಸಲಾತಿ ಪ್ರಕ್ರಿಯೆಯಲ್ಲಿ ಬದಲಾವಣೆ ಮಾಡಿದ್ದು, ಜ. 28 ರಂದು ಬೆಳಗ್ಗೆ 10.30ಕ್ಕೆ ಕಡಬ ತಾಲೂಕಿನ ಗ್ರಾ.ಪಂ.ಅಧ್ಯಕ್ಷ, ಉಪಾಧ್ಯಕ್ಷ ಮೀಸಲಾತಿ ಹಾಗೂ ಜ.27ರಂದು ಅಪರಾಹ್ನ 3 ಗಂಟೆಗೆ ಸುಳ್ಯ ತಾಲೂಕಿನ ಮೀಸಲಾತಿ ಪ್ರಕ್ರಿಯೆಯು ಪುತ್ತೂರು ಪುರಭವನದಲ್ಲಿ ನಡೆಯಲಿದೆ.