(ನ್ಯೂಸ್ ಕಡಬ) newskadaba.com ಮಂಗಳೂರು, ಜ. 20. ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಕೆ. ಸುಧಾಕರ್ ರವರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜನವರಿ 21 ಹಾಗೂ 22 ರಂದು ಪ್ರವಾಸ ಕೈಗೊಂಡಿದ್ದಾರೆ.
ಜನವರಿ 21 ರಂದು ಬೆಳಿಗ್ಗೆ 11.30 ಕ್ಕೆ ವಿಮಾನದ ಮೂಲಕ ಮಂಗಳೂರಿಗೆ ಆಗಮಿಸಿ, 12 ಗಂಟೆಗೆ ನಗರದ ವೆನ್ ಲಾಕ್ ಜಿಲ್ಲಾಸ್ಪತ್ರೆಯ ಆವರಣದಲ್ಲಿ ನಿರ್ಮಾಣ ಮಾಡಿರುವ ನ್ಯೂ ಮೆಡಿಕಲ್ ಸೆಂಟರ್ ನ ಉದ್ಘಾಟನೆ ಮಾಡಲಿದ್ದಾರೆ. ಮಧ್ಯಾಹ್ನ 2 ಗಂಟೆಗೆ ಮಂಗಳೂರಿನಿಂದ ಉಡುಪಿಗೆ ತೆರಳಲಿದ್ದಾರೆ. ರಾತ್ರಿ 9 ಕ್ಕೆ ಮಂಗಳೂರಿಗೆ ಆಗಮಿಸಿ ವಾಸ್ತವ್ಯ ಹೂಡಲಿದ್ದಾರೆ. ಜನವರಿ 22 ರಂದು ಬೆಳಿಗ್ಗೆ 10 ಕ್ಕೆ ದ.ಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ, ಮಧ್ಯಾಹ್ನ 1.50 ಗಂಟೆಗೆ ಮಂಗಳೂರಿನಿಂದ ವಿಮಾನದ ಮೂಲಕ ಬೆಂಗಳೂರಿಗೆ ತೆರಳಲಿದ್ದಾರೆ.