2018-19 ಸಾಲಿನ ಕರ್ನಾಟಕ ಡಿ.ಎಸ್.ಟಿ-ಪಿಹೆಚ್.ಡಿ. ಶಿಷ್ಯವೇತನ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 20. ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು ಪ್ರಸ್ತುತ ಸಾಲಿನಲ್ಲಿ “ಕರ್ನಾಟಕ ಡಿ.ಎಸ್.ಟಿ -ಪಿಹೆಚ್.ಡಿ. ಶಿಷ್ಯವೇತನ” ಎಂಬ ಯೋಜನೆಯಡಿ ಶಿಷ್ಯವೇತನ ಪಡೆಯಲು ವಿಜ್ಞಾನ ಮತ್ತು ಇಂಜಿನಿಯರಿಂಗ್ ವಿಷಯಗಳಲ್ಲಿ ಕರ್ನಾಟಕದಲ್ಲಿರುವ ಮಾನ್ಯತೆ ಪಡೆದ ವಿಶ್ವ ವಿದ್ಯಾಲಯ/ ಸಂಸ್ಥೆ/ ಕಾಲೇಜುಗಳಲ್ಲಿ ಈಗಾಗಲೇ ಪಿ.ಹೆಚ್.ಡಿ. ಪದವಿಗೆ ನೋಂದಾಯಿತರಾಗಿರುವ  ಸಂಶೋಧನಾ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಅರ್ಹ ಅಭ್ಯರ್ಥಿಗಳು ಜಾಲತಾಣ http://ksteps.karnataka.gov.in ರಲ್ಲಿ ಫೆಬ್ರವರಿ 10 ರೊಳಗೆ ಅರ್ಜಿ ಸಲ್ಲಿಸಬೇಕು. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ:080-26711166 ಇಮೇಲ್ ವಿಳಾಸ: ksteps.dst@gmail.com, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಕರ್ನಾಟಕ ಸರ್ಕಾರ. ‘ವಿಜ್ಞಾನ ಭವನ’ ನಂ:24/2, 3ನೇ ಮಹಡಿ, 21ನೇ ಮುಖ್ಯ ರಸ್ತೆ, ಬನಶಂಕರಿ 2ನೇ ಹಂತ, ಬೆಂಗಳೂರು-560 070 ನ್ನು ಸಂಪರ್ಕಿಸುವಂತೆ  ಕೆಸ್ಟೆಪ್ಸ್‍ ನ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ಹೆಜಮಾಡಿ: ಬಾವಿಗೆ ಹಾರಿ ವೃದ್ದೆ ಆತ್ಮಹತ್ಯೆ

error: Content is protected !!
Scroll to Top