ಸುರತ್ಕಲ್: ಫರ್ನಿಚರ್ ಮಳಿಗೆಯಲ್ಲಿ ಬೆಂಕಿ ಅವಘಡ ➤ ಅಪಾರ ನಷ್ಟ

(ನ್ಯೂಸ್ ಕಡಬ) newskadaba.com ಸುರತ್ಕಲ್‌, ಜ. 23. ಇಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ ಅಂಗಡಿಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ ಘಟನೆ ಸುರತ್ಕಲ್‌ನಲ್ಲಿ ನಡೆದಿದೆ.


ಶುಕ್ರವಾರದಂದು ರಾತ್ರಿ 11 ಗಂಟೆಯ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದರಿಂದ ಅಂಗಡಿಯಲ್ಲಿದ್ದ ಸೊತ್ತುಗಳು ಬೆಂಕಿಗಾಹುತಿಯಾಗಿದೆ ಅಲ್ಲದೇ ಅಪಾರ ನಷ್ಟವೂ ಸಂಭವಿಸಿದೆ ಎನ್ನಲಾಗಿದೆ. ಸ್ಥಳಕ್ಕೆ ಸುರತ್ಕಲ್ ಠಾಣಾ ಪೊಲೀಸರು ಭೇಟಿ ನೀಡಿ ತನಿಖೆ ನಡೆಸಿ, ಬೆಂಕಿಯು ಶಾರ್ಟ್ ಸರ್ಕ್ಯೂಟ್ ನಿಂದ ಉಂಟಾಗಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಇನ್ನು ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕದಳದ ವಾಹನಗಳು ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದೆ.

Scroll to Top