ಲಾಲು ಪ್ರಸಾದ್ ಯಾದವ್ ಆರೋಗ್ಯ ಸ್ಥಿತಿ ಗಂಭೀರ ➤ ದೆಹಲಿಯ ಏಮ್ಸ್ ಆಸ್ಪತ್ರೆಗೆ ಸ್ಥಳಾಂತರ..!

(ನ್ಯೂಸ್ ಕಡಬ) newskadaba.com ರಾಂಚಿ, ಜ. 23. ಇಲ್ಲಿನ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿರುವಾಗ ಆರೋಗ್ಯ ಸ್ಥಿತಿ ಹದಗೆಟ್ಟಿದ್ದರಿಂದ ಆರ್‌.ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೇವು ಹಗರಣ ಪ್ರಕರಣದಲ್ಲಿ ಶಿಕ್ಷೆ ಅನುಭವಿಸುತ್ತಿರುವ ಲಾಲು ಪ್ರಸಾದ್ ಯಾದವ್ (72) ರಾಜೇಂದ್ರ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಕಾಯಿಲೆಗಳಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಿಗೆ ಕಳೆದೆರಡು ದಿನಗಳಿಂದ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಇವರಿಗೆ ಶುಕ್ರವಾರದಂದು ನ್ಯುಮೋನಿಯಾ ಇರುವುದು ಕಂಡುಬಂದಿದೆ.

Scroll to Top