ಪದವು: ಭೀಕರ ರಸ್ತೆ ಅಪಘಾತ ➤ ಓರ್ವ ಮೃತ್ಯು, ನಾಲ್ವರು ಗಂಭೀರ

(ನ್ಯೂಸ್ ಕಡಬ) newskadaba.com ಕಡಬ, ಜ.24. ರಿಟ್ಝ್ ಕಾರು ಹಾಗೂ ಮಹೀಂದ್ರ ಬೊಲೆರೋ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಓರ್ವ ಮೃತಪಟ್ಟು, ನಾಲ್ವರು ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಪದವು ಎಂಬಲ್ಲಿ ನಡೆದಿದೆ.

ರಿಟ್ಝ್ ಕಾರು ಉಪ್ಪಿನಂಗಡಿ ಕಡೆಯಿಂದ ಹೊಸ್ಮಠ ಕಡೆಗೆ ಬರುತ್ತಿದ್ದು, ಪದವು – ಬಲ್ಯ ನಡುವೆ ತಿರುವಿನಲ್ಲಿ ಢಿಕ್ಕಿ ನಡೆದಿದೆ. ಘಟನೆಯಲ್ಲಿ ಹೊಸ್ಮಠ ಹಲ್ಲಂಗೇರಿ ನಿವಾಸಿ ನಿಕೋಲಸ್ ಮಾರ್ಟಿಸ್ ಎಂಬವರ ಪುತ್ರ ನವೀನ್ ಮಾರ್ಟಿಸ್(30) ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಮೃತರ ತಂದೆ ನಿಕೋಲಸ್ ಮಾರ್ಟಿಸ್, ತಾಯಿ ಸಿಸಿಲಿಯಾ ಲಸ್ರಾದೋ, ಸಹೋದರಿ ಸುಶ್ಮಾ ಮಾರ್ಟಿಸ್ ಹಾಗೂ ಪತ್ನಿ ಲವಿಟಾ ಲೋಬೋ ಗಂಭೀರ ಗಾಯಗೊಂಡಿದ್ದು, ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

Also Read  ಕಡಬ: ಆಪರೇಷನ್ ಎಲಿಫೆಂಟ್ ಕಾರ್ಯಾಚರಣೆ ವೇಳೆ ಅಧಿಕಾರಿಗಳೊಂದಿಗೆ ವಾಗ್ವಾದ- ಕರ್ತವ್ಯಕ್ಕೆ ಅಡ್ಡಿ ಪ್ರಕರಣ ➤ ಬಂಧಿತ 7 ಮಂದಿ ಆರೋಪಿಗಳಿಗೆ ಜಾಮೀನು

error: Content is protected !!