ಬೆಳ್ತಂಗಡಿ: ಅಪ್ರಾಪ್ತ ಬಾಲಕಿಯ ಅತ್ಯಾಚಾರ ➤ ಆರೋಪಿಯ ಬಂಧನ



(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜ. 25. ಅಪ್ರಾಪ್ತ ವಯಸ್ಸಿನ ಬಾಲಕಿಯೋರ್ವಳನ್ನು ಆಕೆಯ ದೊಡ್ಡಪ್ಪನ ಮಗನೇ ಅತ್ಯಾಚಾರವೆಸಗಿರುವ ಆರೋಪಿಯನ್ನು ಬಂಧಿಸಿದ ಘಟನೆ ತಾಲೂಕಿನ ಬಂದಾರು ಗ್ರಾಮದ ಪುಂಡೈಬನ ಎಂಬಲ್ಲಿ ನಡೆದಿದೆ.





ಬಂಧಿತ ಆರೋಪಿ ಪ್ರವೀಣ್ ಎಂಬಾತ ಆಗಾಗ ಬಾಲಕಿಯ ಮನೆಗೆ ಬಂದು ಹೋಗುತ್ತಿದ್ದು, ಬಲಾತ್ಕಾರವಾಗಿ ದೈಹಿಕ ಸಂಪರ್ಕ ಬೆಳೆಸಿದ್ದಾನೆ ಎನ್ನಲಾಗಿದೆ. ಇದೀಗ ಬಾಲಕಿಗೆ ಹೊಟ್ಟೆನೋವು ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ಕರೆದೊಯ್ದಾಗ ಆಕೆ ಆರು ತಿಂಗಳ ಗರ್ಭಿಣಿಯಾಗಿರುವುದು ಬೆಳಕಿಗೆ ಬಂದಿದೆ. ಈ ಕುರಿತು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಿ ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.






error: Content is protected !!
Scroll to Top