ಕೊನೆಗೂ ಜೈಲಿನಿಂದ ಹೊರಬಂದ ತುಪ್ಪದ ಬೆಡಗಿ ರಾಗಿಣಿ ದ್ವಿವೇದಿ ➤ 145 ದಿನಗಳ ಜೈಲುವಾಸ ಅಂತ್ಯ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.25. ಡ್ರಗ್ ಪ್ರಕರಣದಲ್ಲಿ ಜೈಲು ಸೇರಿದ್ದ ತುಪ್ಪದ ರಾಣಿ ರಾಗಿಣಿ ದ್ವಿವೇದಿ ಕೊನೆಗೂ ಸಮಾಧಾನದ ನಿಟ್ಟುಸಿರು ಬಿಟ್ಟಿದ್ದು, ಸುಪ್ರೀಂ ಕೋರ್ಟ್ ಜಾಮೀನು ನೀಡಿದ್ದರಿಂದ ಸೋಮವಾರದಂದು ಜೈಲಿನಿಂದ ಬಿಡುಗಡೆಗೊಂಡಿದ್ದಾರೆ.

ಸ್ಯಾಂಡಲ್ ವುಡ್ ಡ್ರಗ್ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದ ನಟಿ ರಾಗಿಣಿ ದ್ವಿವೇದಿಯ ಜಾಮೀನು ಅರ್ಜಿಯನ್ನು ವಿಶೇಷ ನ್ಯಾಯಾಲವು ತಿರಸ್ಕರಿಸಿತ್ತು. ನಂತರ ಹೈಕೋರ್ಟ್ ಮೊರೆ ಹೋಗಿದ್ದ ನಟಿಗೆ ಅಲ್ಲೂ ಜಾಮೀನು ಸಿಗದ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಕದ ತಟ್ಟಿದ್ದರು‌. ಜನವರಿ 21 ರಂದು ಜಾಮೀನು ಅಂಗೀಕಾರಗೊಳಿಸಿ ಸುಪ್ರೀಂ ಕೋರ್ಟ್ ಆದೇಶಿಸಿದ್ದು, ನಾಲ್ಕು ದಿನಗಳ ಬಳಿಕ ಇಂದು ಜೈಲಿನಿಂದ ಹೊರಬಂದಿದ್ದಾರೆ‌.

Also Read  ನಾಳೆ 28 ಶಾಸಕರು ಸಚಿವರಾಗಿ ಪದಗ್ರಹಣ

 

error: Content is protected !!
Scroll to Top