ಉಳ್ಳಾಲ: ಆಸ್ಪತ್ರೆಗೆ ತಪಾಸಣೆಗೆಂದು ಬಂದ ಕಾಮುಕನಿಂದ ನರ್ಸ್ ಗೆ ಕಿರುಕುಳ ➤ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಉಳ್ಳಾಲ, ಜ. 27. ಇಲ್ಲಿನ ಕೋಟೆಕಾರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಆರೋಗ್ಯ ತಪಾಸಣೆಗೆಂದು ಬಂದಿದ್ದ ವ್ಯಕ್ತಿಯೋರ್ವ ತಪಾಸಣೆ ನಡೆಸುತ್ತಿದ್ದ ನರ್ಸ್ ಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪಿಯನ್ನು ಬಂಧಿಸಿದ ಘಟನೆ ಇಂದು ನಡೆದಿದೆ.

ಬಂಧಿತ ಆರೋಪಿಯನ್ನು ಕೆ.ಸಿ. ರೋಡ್ ಕಾಟುಂಗುರ ಗುಡ್ಡೆ ನಿವಾಸಿ ಇಬ್ರಾಹಿಂ ಖಲೀಲ್ (27) ಎಂದು ಗುರುತಿಸಲಾಗಿದೆ. ಇಂದು ಬೆಳಗ್ಗೆ ಕೋಟೆಕಾರಿನ ಆರೋಗ್ಯ ಕೇಂದ್ರಕ್ಕೆ ಬಂದಿದ್ದ ಆರೋಪಿಯು ತಪಾಸಣೆ ನಡೆಸುತ್ತಿದ್ದ ನರ್ಸ್ ಗೆ ಲೈಂಗಿಕ ಕಿರುಕುಳ ನೀಡಿದ್ದು, ಈ ಕುರಿತು ಕೂಡಲೇ ಆಸ್ಪತ್ರೆ ಸಿಬಂದಿ ಉಳ್ಳಾಲ ಪೊಲೀಸರ ಗಮನಕ್ಕೆ ತಂದಿದ್ದು ಸ್ಥಳಕ್ಕಾಗಮಿಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

Also Read  ಶಾಲೆಯಲ್ಲಿ ಆಟವಾಡುತ್ತಿದ್ದ ವೇಳೆ ಚೇಳು ಕಚ್ಚಿ ಬಾಲಕಿ ಮೃತ್ಯು..!

error: Content is protected !!
Scroll to Top