ಉಪ್ಪಿನಂಗಡಿ: ಡಿವೈಡರ್ ಗೆ ಢಿಕ್ಕಿ ಹೊಡೆದ ಬೈಕ್ ➤ ಕಡಬದ ನವವಿವಾಹಿತ ಮೃತ್ಯು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜ.27. ಬೈಕೊಂದು ಡಿವೈಡರ್ ಗೆ ಢಿಕ್ಕಿ ಹೊಡೆದ ಪರಿಣಾಮ ನವ ವಿವಾಹಿತನೋರ್ವ ಮೃತಪಟ್ಟ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉಪ್ಪಿನಂಗಡಿ ಜಂಕ್ಷನ್ ಬಳಿ ಮಂಗಳವಾರ ರಾತ್ರಿ ನಡೆದಿದೆ.

ಮೃತ ಯುವಕನನ್ನು ಕಡಬ ತಾಲೂಕಿನ ಹಳೆನೇರಂಕಿ ಗ್ರಾಮದ ಕಲ್ಲೇರಿ ನಿವಾಸಿ ದಿ| ವೆಂಕಟೇಶ್ ದೇವಾಡಿಗ ಎಂಬವರ ಪುತ್ರ ಕಿಶೋರ್(29) ಎಂದು ಗುರುತಿಸಲಾಗಿದೆ. 2020 ಡಿಸೆಂಬರ್ ನಲ್ಲಿ ವಿವಾಹವಾಗಿದ್ದ ಇವರು ಮಂಗಳೂರಿನ ಕಂಪೆನಿಯೊಂದರಲ್ಲಿ ಉದ್ಯೋಗದಲ್ಲಿದ್ದು, ಮಂಗಳವಾರ ರಾತ್ರಿ ಮನೆಗೆ ತೆರಳುತ್ತಿದ್ದ ವೇಳೆ ಇವರು ಚಲಾಯಿಸುತ್ತಿದ್ದ ಬೈಕ್ ನಿಯಂತ್ರಣ ಕಳೆದುಕೊಂಡು ಡಿವೈಡರ್ ಗೆ ಢಿಕ್ಕಿ ಹೊಡೆದಿದ್ದರಿಂದ ಈ ದುರ್ಘಟನೆ ಸಂಭವಿಸಿದೆ.

Also Read  ಕ್ಯಾಂಪಸ್ ಫ್ರಂಟ್ ವತಿಯಿಂದ ಉಡುಪಿಯಲ್ಲಿ ವಿಶ್ವ ಹಿಜಾಬ್ ದಿನಾಚರಣೆ

error: Content is protected !!
Scroll to Top