ರಾತ್ರೋರಾತ್ರಿಯಲ್ಲಿ ಕಾಣೆಯಾಗಿದ್ದ ಬಾಲಕಿ ಶವವಾಗಿ ಪತ್ತೆ..! ➤ ಕೊಲೆ ಶಂಕೆ

(ನ್ಯೂಸ್ ಕಡಬ) newskadaba.com ಹಾಸನ, ಜ. 28. ರಾತ್ರೋರಾತ್ರಿ ಮನೆಯಿಂದ ಕಾಣೆಯಾಗಿದ್ದ ಬಾಲಕಿಯ ಮೃತದೇಹವೊಂದು ಪಕ್ಕದ ಊರಿನ ಕೆರೆಯಲ್ಲಿ ಪತ್ತೆಯಾದ ಘಟನೆ ನಡೆದಿದೆ.


ಕಳೆದ ಸೋಮವಾರದಂದು ರಾತ್ರಿ 11 ಗಂಟೆಯ ಬಳಿಕ ಕಾಣೆಯಾಗಿದ್ದ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ಕೆರಗೋಡು ಗ್ರಾಮದ ಬಾಲಕಿಯ ಮೃತದೇಹವು ಬುಧವಾರದಂದು ಪಕ್ಕದ ಊರಿನ ಅಂಕವಳ್ಳಿ ಎಂಬ ಕೆರೆಯಲ್ಲಿ ಪತ್ತೆಯಾಗಿದ್ದು, ಅತ್ಯಾಚಾರಗೈದು ಕೊಲೆಗೈದಿರಬಹುದು ಎಂದು ಶಂಕಿಸಲಾಗಿದೆ. ಆದರೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ನೀಡಿರುವ ಆಕೆಯ ಪೋಷಕರು ಬಾಲಕಿಯನ್ನು ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿದ್ದು, ಯೋಗೇಶ್ (23) ಎಂಬಾತನು ತನ್ನ ಪುತ್ರಿಯನ್ನು ಪ್ರೀತಿಸುವಂತೆ ದುಂಬಾಲು ಬಿದ್ದಿದ್ದು, ಆತ ಫೋನ್ ಮಾಡಿ ಹುಡುಗಿಯನ್ನು ಕರೆಸಿಕೊಂಡು ಸ್ನೇಹಿತರೊಂದಿಗೆ ಸೇರಿ ಅತ್ಯಾಚಾರವೆಸಗಿ ಕೊಲೆ ಮಾಡಿದ್ದಾನೆ ಎಂದು ಪೋಷಕರು ಆರೋಪಿಸಿದ್ದಾರೆ. ಈ ಕುರಿತು ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Also Read  ರೈಲಿಗೆ ಹಾರಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ

error: Content is protected !!
Scroll to Top