ಪಾಣೆಮಂಗಳೂರು: ಪಾದಚಾರಿಗೆ ಕಾರು ಢಿಕ್ಕಿ ➤ ವ್ಯಕ್ತಿ ಮೃತ್ಯು



(ನ್ಯೂಸ್ ಕಡಬ) newskadaba.com ಬಂಟ್ವಾಳ, ಜ. 29. ರಸ್ತೆ ಬದಿಯಲ್ಲಿ ನಿಂತಿದ್ದ ಪಾದಚಾರಿಯೊಬ್ಬರಿಗೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಮೃತಪಟ್ಟ ಘಟನೆ ಗುರುವಾರ ರಾತ್ರಿ ನಡೆದಿದೆ.





ಮೃತರನ್ನು ಶಂಭೂರು ನಿವಾಸಿ ಸಂಜೀವ (70) ಎಂದು ಗುರುತಿಸಲಾಗಿದೆ. ಇವರು ರಸ್ತೆ ದಾಟಲೆಂದು ನಿಂತಿದ್ದ ಸಂದರ್ಭ ಕಾರೊಂದು‌ ಢಿಕ್ಕಿ ಹೊಡೆದಿದ್ದು, ಗಂಭೀರ ಗಾಯಗೊಂಡಿದ್ದ ಇವರನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ಅವರು ಮೃತಪಟ್ಟಿದ್ದರು. ಈ ಕುರಿತು ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






error: Content is protected !!
Scroll to Top