ಹುತಾತ್ಮರ ದಿನಾಚರಣೆ ಆಚರಣೆ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 31. ಹುತಾತ್ಮರ ದಿನಾಚರಣೆಯ ಅಂಗವಾಗಿ ಇಂದು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಂಣದಲ್ಲಿ ಮಹಾತ್ಮ ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪನಮನವನ್ನು ಜಿಲ್ಲಾಧಿಕಾರಿ ಡಾ. ರಾಜೇಂದ್ರ. ಕೆ.ವಿ, ಅಪರ ಜಿಲ್ಲಾಧಿಕಾರಿ ಎಮ್.ಜೆ. ರೂಪಾ, ವಾರ್ತಾಧಿಕಾರಿ ಮಂಜುನಾಥ್ ಬಿ., ಮತ್ತಿತರ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿ ಕಚೇರಿಯ ಸಿಬ್ಬಂದಿ ವರ್ಗದವರು ಅರ್ಪಿಸಿ, 2 ನಿಮಿಷಗಳ ಕಾಲ ಮೌನಾಚರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ರವರು ಮಾತನಾಡಿ, ನಮ್ಮ ದೇಶಕ್ಕೆ ಸ್ವಾಂತಂತ್ರ್ಯ ದೊರಕಿಸಿಕೊಡಲು ಅನೇಕ ಮಹನೀಯರು ಹುತಾತ್ಮರಾಗಿದ್ದಾರೆ. ಸ್ವಾತಂತ್ರ್ಯ ಸಂಗ್ರಾಮದಲ್ಲಿ ಹೋರಾಡಿದ ಹುತಾತ್ಮರ ತ್ಯಾಗ, ಬಲಿದಾನವನ್ನು ಪ್ರತಿಯೊಬ್ಬರು ಸ್ಮರಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದರು. ಸ್ವಾತಂತ್ರ್ಯ ಸಂಗ್ರಾಮದಲ್ಲಿ ಪ್ರಾಣತೆತ್ತು ಹುತಾತ್ಮರಾದವರ ಸ್ಮರಣಾರ್ಥವಾಗಿ ಪ್ರತೀ ವರ್ಷ ಜನವರಿ 30 ರಂದು ಹುತಾತ್ಮರ ದಿನಾಚರಣೆಯನ್ನು ಆಚರಿಸಲಾಗುತ್ತದೆ. ಇತರರಲ್ಲಿ ದೇಶ ಪ್ರೇಮ ಮತ್ತು ರಾಷ್ಟ್ರಭಕ್ತಿಯನ್ನು ಮೂಡಿಸುವ ಸದುದ್ದೇಶ ಈ ಆಚರಣೆಯ ಮೂಲ ಉದ್ದೇಶವಾಗಿದೆ.  ಅನೇಕ ವೀರ ನಾಯಕರು ತಮ್ಮ ಜೀವನವನ್ನೇ ಮುಡಿಪಾಗಿಟ್ಟು, ಚಳುವಳಿಯನ್ನು ನಡೆಸಿ, ಶಾಂತಿ, ಅಹಿಂಸೆಯಿಂದ ದೇಶಕ್ಕೆ ಸ್ವಾತಂತ್ರ್ಯವನ್ನು ತಂದುಕೊಟ್ಟಿದ್ದಾರೆ ಎಂದರು. ಸ್ವಾತಂತ್ರ್ಯ ಹೋರಾಟಗಾರರ ಪಾತ್ರದ ವಿಶೇಷವನ್ನು ತಿಳಿಯಲು ಭಾಷಣ, ಚರ್ಚೆಯಂತಹ ಕಾರ್ಯಕ್ರಮವನ್ನು ಆಯೋಜಿಸಿ ಸ್ವಾತಂತ್ರ್ಯ ಹೋರಾಟದ ಮಹತ್ವವನ್ನು ಯುವಜನರಿಗೆ ಸಾರುವುದರೊಂದಿಗೆ ದೇಶದ ಸ್ವಾತಂತ್ರ್ಯವನ್ನು ಉಳಿಸುವುದು ಹಾಗೂ ರಾಷ್ಟ್ರದ ಐಕ್ಯತೆಯನ್ನು ಉತ್ತೇಜಿಸಿ, ಅವರುಗಳ ಆದರ್ಶಗಳಿಗೆ ನಾವೆಲ್ಲರೂ ಬದ್ದರಾಗಬೇಕು ಎಂದರು.

error: Content is protected !!

Join the Group

Join WhatsApp Group