ವಿದ್ಯಾರ್ಥಿಗಳಿಗೆ ವಿಶೇಷ ಕ್ರೀಡಾ ತರಬೇತಿ ಶಿಬಿರ

(ನ್ಯೂಸ್ ಕಡಬ) newskadaba.com ಮಂಗಳೂರು, . 31. ಪ್ರಸ್ತುತ ಸಾಲಿನಲ್ಲಿ ದ.ಕ ಜಿಲ್ಲೆಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಜಿಲ್ಲಾ ಪಂಚಾಯತ್ ಅನುದಾನದಡಿ ಜಿಲ್ಲೆಯ ಪ್ರೌಢ ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಅಥ್ಲೆಟಿಕ್ಸ್, ವೇಟ್‍ ಲಿಫ್ಟಿಂಗ್ ಮತ್ತು ಹಾಕಿ ಕ್ರೀಡೆಗಳಲ್ಲಿ ತರಬೇತಿ ನೀಡಲು ಕ್ರೀಡಾವಾರು 21 ದಿನಗಳ ವಿಶೇಷ ಕ್ರೀಡಾ ತರಬೇತಿ ಶಿಬಿರಗಳನ್ನು ಫೆಬ್ರವರಿ 4 ರಿಂದ 24 ರವರೆಗೆ ಮಂಗಳಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದು, ಆಸಕ್ತ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಫೆಬ್ರವರಿ 3 ಕೊನೆಯ ದಿನ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳಾ ಕ್ರೀಡಾಂಗಣ, ದೂ.ಸಂಖ್ಯೆ: 0824-2451264 ಹಾಗೂ ಇ-ಮೇಲ್ adyssdk@yahoo.comನ್ನು ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Scroll to Top