ಬ್ಯಾಂಕಿಂಗ್ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷಾ ಪೂರ್ವ ತರಬೇತಿ

(ನ್ಯೂಸ್ ಕಡಬ) newskadaba.com ಮಂಗಳೂರು, . 31. ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಹಾಗೂ ಮಂಗಳೂರು ಬಲ್ಮಠ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಇವರ ಸಂಯುಕ್ತಾಶ್ರಯದಲ್ಲಿ ಬ್ಯಾಂಕಿಂಗ್ ಹುದ್ದೆಗಳ ನೇಮಕಾತಿಗಾಗಿ ಫೆಬ್ರವರಿ 2 ರಿಂದ ಉಚಿತ ಸ್ಪರ್ಧಾತ್ಮಕ ಪರೀಕ್ಷಾ ಪೂರ್ವ ತರಬೇತಿಯನ್ನು ಬಲ್ಮಠ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಆಯೋಜಿಸಲಾಗಿದೆ.


ತರಬೇತಿ ತರಗತಿಗಳು ವಾರದ ದಿನಗಳಲ್ಲಿ ಮಧ್ಯಾಹ್ನ 2 ಗಂಟೆಯಿಂದ ಸಂಜೆ 4.30 ರವರೆಗೆ ಹಾಗೂ ರಜಾ ದಿನಗಳಲ್ಲಿ ಬೆಳಿಗ್ಗೆ 9.30 ಗಂಟೆಯಿಂದ ಮಧ್ಯಾಹ್ನ 1.30 ರ ವರೆಗೆ ನಡೆಸಲಾಗುವುದು. ಪರೀಕ್ಷಾ ಪೂರ್ವ ತರಬೇತಿ ಪಡೆಯಲು ಅಭ್ಯರ್ಥಿಗಳು ತಮ್ಮ ಹೆಸರನ್ನು ಖುದ್ದಾಗಿ ಜನವರಿ 5 ರೊಳಗೆ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿಯಲ್ಲಿ ನೋಂದಾಯಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಮಂಗಳೂರು ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ಅಥವಾ ದೂರವಾಣಿ ಸಂಖ್ಯೆ: 0824-2457139 ನ್ನು ಸಂಪರ್ಕಿಸುವಂತೆ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿಯ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ಜೇಸಿಐ ಕಡಬ ಕದಂಬ ಘಟಕದ ಜೇಸಿ ಸಪ್ತಾಹ 'ಕದಂಬೋತ್ಸವ'ದ ಸಮಾರೋಪ ➤ ಇಂದು ಸಂಜೆ ಕಡಬದಲ್ಲಿ 'ಡ್ಯಾನ್ಸ್ ಬ್ಲಾಸ್ಟ್' ಅದ್ಭುತ ನೃತ್ಯ ಪ್ರದರ್ಶನ

error: Content is protected !!
Scroll to Top