ಮಂಗಳೂರು: ಹಳೆಯ ಸ್ನೇಹಿತೆ ಹಾಗೂ ಆಕೆಯ ಪ್ರಿಯಕರನಿಗೆ ರೌಡಿಯಿಂದ ಹಲ್ಲೆ



(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 01. ಯುವತಿಯೋರ್ವಳು ಸ್ನೇಹಿತರೊಂದಿಗೆ ರೆಸ್ಟೋರೆಂಟ್‌ ಒಂದರಲ್ಲಿ ಕುಳಿತಿದ್ದ ಸಂದರ್ಭ ಆಕೆಯ ಹಳೆ ಸ್ನೇಹಿತ ಮತ್ತು ಆತನ ಗೆಳೆಯರು ಏಕಾಏಕಿ ದಾಳಿ ನಡೆಸಿದ ಘಟನೆ ನಗರದ ಕದ್ರಿ ಎಂಬಲ್ಲಿ ನಡೆದಿದೆ.






ಜ. 30ರಂದು ಮಧ್ಯಾಹ್ನ ಕದ್ರಿಯ ಬಾರ್ ಆ್ಯಂಡ್ ರೆಸ್ಟೋರೆಂಟ್ ವೊಂದರಲ್ಲಿ ಈ ಘಟನೆ ನಡೆದಿದ್ದು, ಇದರ ಸಿಸಿಟಿವಿ ವಿಡಿಯೋ ತುಣುಕು ಇದೀಗ ಸಾಮಾಜಿಕ‌ ಜಾಲತಾಣದಲ್ಲಿ ವೈರಲ್ ಆಗಿದೆ. ಆಕೆ ತನ್ನ ಮೂವರು ಗೆಳೆಯರೊಂದಿಗೆ ರೆಸ್ಟೋರೆಂಟ್ ನಲ್ಲಿ ಕುಳಿತಿದ್ದಾಗ ಏಕಾಏಕಿ ನುಗ್ಗಿದ ಯುವಕರ ತಂಡ ದಾಳಿ ನಡೆಸಿ, ಹೋಟೆಲ್‌ ನಲ್ಲಿ ಸಿಕ್ಕ ವಸ್ತುಗಳಿಂದ ಹೊಡೆದಾಟ ನಡೆಸಿದ್ದಾರೆ. ಈ ವೇಳೆ ಯುವತಿಯೊಂದಿಗೆ ಇದ್ದ ಯುವಕ ಚೂರಿ ಇರಿತದಿಂದ ಗಾಯಗೊಂಡಿದ್ದಾನೆ. ಈ ಬಗ್ಗೆ ಮಂಗಳೂರು ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






error: Content is protected !!
Scroll to Top