(ನ್ಯೂಸ್ ಕಡಬ) newskadaba.com ಕಡಬ, ಫೆ.01. ರಸ್ತೆ ದಾಟುತ್ತಿದ್ದ ವೇಳೆ ಕೆಎಸ್ಸಾರ್ಟಿಸಿ ಬಸ್ಸೊಂದು ಢಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೋರ್ವರು ಗಂಭೀರ ಗಾಯಗೊಂಡ ಘಟನೆ ಸುಬ್ರಹ್ಮಣ್ಯ – ಧರ್ಮಸ್ಥಳ ರಾಜ್ಯ ಹೆದ್ದಾರಿಯ ಕೈಕಂಬ ಜಂಕ್ಷನ್ ನಲ್ಲಿ ಸೋಮವಾರದಂದು ನಡೆದಿದೆ.
ಗಂಭೀರ ಗಾಯಗೊಂಡ ವ್ಯಕ್ತಿಯನ್ನು ಬೆಂಗಳೂರು ಮೂಲದ ಟೂರಿಸ್ಟ್ ವಾಹನ ಚಾಲಕ ಭೂತೇಶ್ ಪಿ.ಜೆ. ಎಂದು ಗುರುತಿಸಲಾಗಿದೆ. ಇವರು ಬೆಂಗಳೂರಿನಿಂದ ಧರ್ಮಸ್ಥಳ ಮೂಲಕ ಕುಕ್ಕೇ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ತನ್ನ ವಾಹನವನ್ನು ಕೈಕಂಬ ಜಂಕ್ಷನ್ ನಲ್ಲಿ ನಿಲ್ಲಿಸಿ ಅಂಗಡಿಯಿಂದ ಬಾಟಲ್ ನೀರು ತರಲೆಂದು ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಕೆಎಸ್ಸಾರ್ಟಿಸಿ ಬಸ್ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡು ಚಿಂತಾಜನಕ ಸ್ಥಿತಿಯಲ್ಲಿದ್ದ ಭೂತೇಶ್ ರನ್ನು ತಕ್ಷಣ ಸಾರ್ವಜನಿಕರ ಸಹಕಾರದಿಂದ 108 ಆಂಬುಲೆನ್ಸ್ ನಲ್ಲಿ ಕಡಬ ಆಸ್ಪತ್ರೆಗೆ ಕರೆದೊಯ್ದು ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಡಬ ಪೊಲೀಸರು ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.