(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 02. ಡಾ. ಪಿ. ದಯಾನಂದ ಪೈ-ಪಿ. ಸತೀಶ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮಂಗಳೂರು, ರಥಬೀದಿ ಇವರ ವತಿಯಿಂದ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಕಾಲೇಜು ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ನಡೆಯುವ ಪದವಿ ವಿಜ್ಞಾನ ವಿದ್ಯಾರ್ಥಿಗಳಿಗಾಗಿ ಮಂಗಳೂರು ವಿಭಾಗ ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಫರ್ಧೆಯು ಫೆಬ್ರವರಿ 11 ರಂದು ಡಾ. ಪಿ. ದಯಾನಂದ ಪೈ-ಪಿ. ಸತೀಶ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಲಿದೆ.
ಸ್ಪರ್ಧೆಯ ಮುಖ್ಯ ಶೀರ್ಷಿಕೆ “ಮನುಕುಲಕ್ಕಾಗಿ ವಿಜ್ಞಾನ, ತಂತ್ರಜ್ಞಾನ ಮತ್ತು ಆವಿಷ್ಕಾರ”. ವಿದ್ಯಾರ್ಥಿಗಳು ಹೆಸರು ನೋಂದಾಯಿಸಲು ಫೆಬ್ರವರಿ 6 ಕೊನೆಯ ದಿನ. ಹೆಚ್ಚಿನ ಮಾಹಿತಿ ಹಾಗೂ ಹೆಸರು ನೋಂದಾಯಿಸಲು ಪಿ.ಎಸ್ ಕೌಶಿಕ್ (ಮೊಬೈಲ್ ಸಂ.9742711555) ಹಾಗೂ ಮಂಗಳೂರು ರಥಬೀದಿಯ ಡಾ.ಪಿ.ದಯಾನಂದ ಪೈ-ಪಿ.ಸತೀಶ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜನ್ನು (ಮೊಬೈಲ್ ಸಂ.9448524245) ಸಂಪರ್ಕಿಸಬೇಕು ಎಂದು ಕಾಲೇಜಿನ ಪ್ರಾಂಶುಪಾಲರು ತಿಳಿಸಿದ್ದಾರೆ.