ಸುಬ್ರಹ್ಮಣ್ಯ: ದ್ವಿಚಕ್ರ ವಾಹನಗಳ ನಡುವೆ ಢಿಕ್ಕಿ ➤ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ

(ನ್ಯೂಸ್ ಕಡಬ) newskadaba.com ಕಡಬ, ಫೆ. 02. ದ್ವಿಚಕ್ರ ವಾಹನಗಳ ನಡುವೆ ಢಿಕ್ಕಿ ಸಂಭವಿಸಿದ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿ 113 ರ ನೆಟ್ಟಣದಲ್ಲಿ ಮಸೀದಿ ಎದುರುಡೆ ಇಂದು ಬೆಳಗ್ಗೆ ನಡೆದಿದೆ.

ಸುಬ್ರಹ್ಮಣ್ಯದಿಂದ ಕಡಬ ಕಡೆಗೆ ಬರುತ್ತಿದ್ದ ಕಡಬದ ಕೆಂಚಪಟ್ರೆ ನಿವಾಸಿ ಸುದರ್ಶನ್ ಬೈಪಡಿತ್ತಾಯ ಎಂಬವರ ಬೈಕಿಗೆ ಹಿಂದಿನಿಂದ ಅತೀ ವೇಗದಲ್ಲಿ ಬಂದ ಬೈಕ್ ಒಂದು ಡಿಕ್ಕಿ ಹೊಡೆದಿದ್ದು ಘಟನೆಯ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಘಟನೆಯಲ್ಲಿ ಸುದರ್ಶನ್ ಬೈಪಡಿತ್ತಾಯ ಅವರ ಕೈಗೆ ತೀವ್ರ ತರಹದ ಗಾಯಗಳಾಗಿದ್ದು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Also Read  ಲಾಕ್‌ಡೌನ್ ಕಟ್ಟುನಿಟ್ಟಾಗಿ ಪಾಲಿಸುವಂತೆ ಸಿಎಂ ಬಿ.ಎಸ್.ವೈ ಮನವಿ

error: Content is protected !!
Scroll to Top