ಗುಂಡ್ಯ: ಅಪರಿಚಿತ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ ➤ ಮೃತದೇಹದ ಅಸ್ಥಿಪಂಜರ ಆಸ್ಪತ್ರೆಗೆ ರವಾನೆ



(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಫೆ.03. ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ಗುಂಡ್ಯ ಎಂಬಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹವೊಂದು ಕೊಳೆತ ಸ್ಥಿತಿಯಲ್ಲಿ ಬುಧವಾರ ಸಂಜೆ ಪತ್ತೆಯಾಗಿದೆ.





ಗುಂಡ್ಯ ಜಂಕ್ಷನ್ ಸಮೀಪ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಮೃತ ಶರೀರದ ಅಸ್ಥಿಪಂಜರ ಇರುವುದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕಾಗಮಿಸಿದ ಉಪ್ಪಿನಂಗಡಿ ಪೊಲೀಸರು ನೆಲ್ಯಾಡಿಯ ಎಸ್ಡಿಪಿಐ ಕಾರ್ಯಕರ್ತರ ನೆರವಿನೊಂದಿಗೆ ಆಂಬ್ಯುಲೆನ್ಸ್ ನಲ್ಲಿ ಮೃತದೇಹವನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಇದು ಕೊಲೆಯೋ ಅಥವಾ ಆಕಸ್ಮಿಕ ಸಾವೊ ಎಂಬ ಬಗ್ಗೆ ತನಿಖೆಯ ಬಳಿಕವಷ್ಟೇ ತಿಳಿದುಬರಬೇಕಿದೆ.






 

error: Content is protected !!
Scroll to Top