ಶಿರಾಡಿ: ಗ್ಯಾಸ್ ಟ್ಯಾಂಕರ್ ಪಲ್ಟಿ | ಅನಿಲ ಸೋರಿಕೆ ➤ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಫೆ.05. ಅನಿಲ ತುಂಬಿದ್ದ ಟ್ಯಾಂಕರೊಂದು ಪಲ್ಟಿಯಾದ ಪರಿಣಾಮ ರಾಷ್ಟ್ರೀಯ ಹೆದ್ದಾರಿ ತಡೆಯುಂಟಾದ ಘಟನೆ ಮಂಗಳೂರು – ಬೆಂಗಳೂರು ರಸ್ತೆಯ ಶಿರಾಡಿ ಸಮೀಪದ ಕೆಂಪುಹೊಳೆ ಎಂಬಲ್ಲಿ ಶುಕ್ರವಾರದಂದು ನಡೆದಿದೆ.

ಮಂಗಳೂರಿನಿಂದ ಬೆಂಗಳೂರು ಕಡೆಗೆ ಗ್ಯಾಸ್ ತುಂಬಿಸಿಕೊಂಡು ತೆರಳುತ್ತಿದ್ದ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆಗಡ್ಡವಾಗಿ ಮಗುಚಿ ಬಿದ್ದಿದೆ ಎನ್ನಲಾಗಿದೆ. ಘಟನೆಯಲ್ಲಿ ಟ್ಯಾಂಕರ್ ನಿಂದ ಅನಿಲ ಸೋರಿಕೆಯಾಗುತ್ತಿದ್ದು, ಹೆದ್ದಾರಿಯಲ್ಲಿ ಸಂಚಾರ ವ್ಯತ್ಯವುಂಟಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳ ಹಾಗೂ ಪೊಲೀಸರು ಭೇಟಿ ನೀಡಿದ್ದು, ರಸ್ತೆ ತಡೆಯಲಾಗಿದೆ. ಬೆಂಗಳೂರಿಗೆ ತೆರಳುವವರನ್ನು ಪರ್ಯಾಯವಾಗಿ ಮಾಣಿಯಿಂದ ಮೈಸೂರು ರಸ್ತೆಯ ಮೂಲಕ ಕಳುಹಿಸಿಕೊಡಲಾಗುತ್ತಿದೆ.

Also Read  ಆಲೆಟ್ಟಿ: ಮದ್ಯರಾತ್ರಿ ಮನೆ ಹಿಂಬದಿಯ ಬರೆ ಕುಸಿತ ➤ ಪ್ರಾಣಾಪಾಯದಿಂದ ಪಾರಾದ ದಂಪತಿ

 

error: Content is protected !!
Scroll to Top