? Breaking News ಪುತ್ತೂರು: ಬೈಕ್ ಹಾಗೂ ರಿಕ್ಷಾ ನಡುವೆ ಢಿಕ್ಕಿ ➤ ವಿದ್ಯಾರ್ಥಿ ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು, ಫೆ. 05. ಬೈಕ್ ಮತ್ತು ರಿಕ್ಷಾ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪುತ್ತೂರು ಸಮೀಪದ ಮುರ ಎಂಬಲ್ಲಿ ಶುಕ್ರವಾರ ರಾತ್ರಿ ನಡೆದಿದೆ.

ಮೃತ ವಿದ್ಯಾರ್ಥಿಯನ್ನು ಪುತ್ತೂರು ಪಡೀಲು ನಿವಾಸಿ ಅಭಿನವ್ ಎಂದು ಗುರುತಿಸಲಾಗಿದೆ. ಕಾಲೇಜು ಶಿಕ್ಷಣದೊಂದಿಗೆ ಪತ್ರಿಕಾ ವಿತರಕನಾಗಿ ಸಾರ್ವಜನಿಕ ವಲಯದಲ್ಲಿ ಚಿರಪರಿಚಿತನಾಗಿದ್ದ ಅಭಿನವ್ ಸಂಚರಿಸುತ್ತಿದ್ದ ಬೈಕ್ ಹಾಗೂ ಆಟೋರಿಕ್ಷಾ ನಡುವೆ ಮುರ ಎಂಬಲ್ಲಿ ಢಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡ ಅಭಿನವ್ ಮೃತಪಟ್ಟಿರುವುದಾಗಿ ವರದಿಯಾಗಿದೆ. ಸ್ಥಳಕ್ಕೆ ಪುತ್ತೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Also Read  ಕಡಬ ಗ್ರಾ.ಪಂ.ನಲ್ಲಿ ಜಮಾಬಂಧಿ ► ಕೊರುಂದೂರು ಅಂಗನವಾಡಿ ಕಟ್ಟಡ ಕಾಮಗಾರಿ ಪರಿಶೀಲನೆ

 

error: Content is protected !!
Scroll to Top