?ಮರಾಠಿ ಮಾತನಾಡುವಂತೆ ಒತ್ತಾಯಿಸಿ ಕನ್ನಡಿಗ ಲಾರಿ ಚಾಲಕನಿಗೆ ಹಲ್ಲೆ..!

(ನ್ಯೂಸ್ ಕಡಬ) newskadaba.com ಬೆಳಗಾವಿ, ಫೆ. 06. ಮರಾಠಿಯಲ್ಲಿ ಮಾತನಾಡುವಂತೆ ಒತ್ತಾಯಿಸಿ ಕರ್ನಾಟಕದ ಲಾರಿ ಚಾಲಕನೋರ್ವನ ಮೇಲೆ ಮರಾಠಿಗರು ಹಲ್ಲೆ ಮಾಡಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.

ಹಲ್ಲೆಗೊಳಗಾದವರನ್ನು ತುಮಕೂರು ತಾಲೂಕಿನ ಶಿರಾ ಲಾರಿ ಚಾಲಕ ಗೋವಿಂದ ಎಂದು ಗುರುತಿಸಲಾಗಿದೆ. ಇವರು ಗುಜರಾತಿನ ಅಹಮದಾಬಾದ್‌ ನಿಂದ ಬೆಂಗಳೂರಿಗೆ ಬರುತ್ತಿದ್ದ ಸಂದರ್ಭ ಮಹಾರಾಷ್ಟ್ರದ ಸತಾರಾ ಟೋಲ್ ಗೇಟ್ ಬಳಿ ಶುಕ್ರವಾರ ರಾತ್ರಿ ಎಂಟು ಗಂಟೆ ವೇಳೆಗೆ, ಮರಾಠಿಗರು ಅರೆ ಬೆತ್ತಲೆ ಮಾಡಿ ಅವರಿಗೆ ಹಲ್ಲೆ ನಡೆಸಿ, ಬಟ್ಟೆಗಳನ್ನು ಹರಿದು ಹಾಕಿ ಅವಮಾನ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಇನ್ನೂ ಘಟನೆ ಸಂಬಂಧ ಕೂಡಲೇ ಎಚ್ಚೆತ್ತುಕೊಂಡ ಬೆಳಗಾವಿ ಪೊಲೀಸರು ಚಾಲಕ ಗೋವಿಂದನನ್ನು ಕರೆಸಿಕೊಂಡು ಕೊಂಡಿದ್ದು, ಘಟನೆ ಕುರಿತು ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಲಾರಿ ಮಾಲೀಕ ಮನವಿ ಮಾಡಿದ್ದಾರೆ.

Also Read  ಭಾರೀ ಮಳೆಯಿಂದಾಗಿ ಅಪಾರ ಆಸ್ತಿ ಪಾಸ್ತಿ ನಷ್ಟಗೊಂಡ ಹಿನ್ನೆಲೆ ► ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೇಂದ್ರ ಸರಕಾರದ ತಂಡದಿಂದ ಪರಿಶೀಲನೆ

error: Content is protected !!
Scroll to Top