ಕಲ್ಲಡ್ಕ: ಟ್ಯಾಂಕರ್ – ಸ್ಕೂಟರ್ ನಡುವೆ ಢಿಕ್ಕಿ➤ ಸವಾರ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಫೆ.07. ಟ್ಯಾಂಕರ್ ಹಾಗೂ ದ್ವಿಚಕ್ರ ವಾಹನದ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಕಲ್ಲಡ್ಕ ಪೇಟೆಯಲ್ಲಿ ಭಾನುವಾರ ಬೆಳಿಗ್ಗೆ ನಡೆದಿದೆ.

ಮೃತ ಸವಾರನನ್ನು ಕಲ್ಲಡ್ಕದ ಬಿಕೆ ನಗರ ನಿವಾಸಿ ಹಿಮಾದ್ ಎಂದು ಗುರುತಿಸಲಾಗಿದೆ. ಮಂಗಳೂರಿನಿಂದ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ ಟ್ಯಾಂಕರ್ ಕಲ್ಲಡ್ಕ ಪೇಟೆಯಲ್ಲಿ ಸ್ಕೂಟರ್ ಗೆ ಢೆಕ್ಕಿಯಾಗಿದ್ದು, ಘಟನೆಯಲ್ಲಿ ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದ ಭೀಕರತೆಗೆ ಯುವಕನ ಮೃತದೇಹ ಛಿದ್ರವಾಗಿತ್ತು. ಸ್ಥಳಕ್ಕೆ ಬಂಟ್ವಾಳ ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Also Read  2022ರಲ್ಲಿ ಅತ್ಯಂತ ಖುಷಿ ಕೊಟ್ಟ ಪುಸ್ತಕ- "ಅರಿವು" ➤ ಅನಂತ ಸುಬ್ರಹ್ಮಣ್ಯ ಶರ್ಮಾ

 

error: Content is protected !!
Scroll to Top